ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಶಾಲೆಗಳ ಗುಣಮಟ್ಟ ಹೆಚ್ಚಿಸಲು ನೆರವಾಗಿ: ರಾಜಪ್ಪ ಮನವಿ

Rashmi Kasaragodu
Updated On : 13 Nov 2013, 11:26 am

ನರಸಿಂಹರಾಜಪುರ: ಶಾಲೆಗಳ ಗುಣಮಟ್ಟ ಹೆಚ್ಚಾಗಬೇಕಾದರೆ ಪೋಷಕರ ಜವಾಬ್ದಾರಿ ಅತಿ ಮುಖ್ಯವಾಗಿದೆ ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ಮಯಾಧಿಕಾರಿ ಡಿ. ರಾಜಪ್ಪ ತಿಳಿಸಿದರು.
ಅವರು ಸೋಮವಾರ ಪಟ್ಟಣದ ಬಸ್ತಿಮಠ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮೂಡಬಾಗಿಲು, ಗ್ರಾಮೀಣ ಮತ್ತು ನಗರ ಕ್ಲಸ್ಟರ್ವ್ಯಾಪ್ತಿಯ ಶಾಲಾ ಎಸ್ಟಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಶಾಲಾ ಮುಖ್ಯೋಪಾಧ್ಯಾಯರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ದೇಶ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಅತಿ ಮುಖ್ಯ. ಭಾರತದ ಎಲ್ಲರೂ ಅಕ್ಷರವಂತರಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಶಿಕ್ಷಣಕ್ಕಾಗಿ ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿದೆ. ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಶಾಲಾ ಎಸ್ಡಿಎಂಸಿ ಜವಾಬ್ದಾರಿ ಹೆಚ್ಚಾಗಿದ್ದು ಹೊಸದಾಗಿ ಆಯ್ಕೆಯಾದ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರಿಗೆ ಸಂಪೂರ್ಣ ಮಾಹಿತಿ ನೀಡುವ ಉದ್ದೇಶದಿಂದ ತಾಲೂಕಿನ ಎಲ್ಲಾ 9 ಕ್ಲಷ್ಟರ್ಗಳ ವ್ಯಾಪ್ತಿಯಲ್ಲೂ ಎರಡು ದಿನಗಳ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು ಮಂಗಳವಾರ ತರಬೇತಿ ಮುಕ್ತಾಯಗೊಳ್ಳಲಿದೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ಬಸ್ತಿಮಠದ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾಗರಾಜ ದೊಡ್ಡಮನಿ ವಹಿಸಿದ್ದರು. ಸಭೆಯಲ್ಲಿ ಬಿಆರ್ಪಿಯ ಕೃಷ್ಣನಾಯಕ್, ಪ್ರಸನ್ನ, ಬಿಆರ್ಸಿ ತಿಪ್ಪೇಸ್ವಾಮಿ, ಶಾಲಾ ಮುಖ್ಯೋಪಾದ್ಯಾಯ ವೀರಯ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement