ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕನಕದಾಸ ಜಯಂತಿ ಪೂರ್ವಭಾವಿ ಸಭೆ

Rashmi Kasaragodu
Updated On : 14 Nov 2013, 12:14 pm

ಕೊಪ್ಪ: ನ.20ರಂದು ನಡೆಯುವ ಭಕ್ತ ಕನಕದಾಸ ಜಯಂತಿ  ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ತಾಪಂ ಸಭಾಂಗಣದಲ್ಲಿ ಬುಧವಾರ ನಡೆಸಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಶ್ರೀಧರ್ ಮೂರ್ತಿ ಪಂಡಿತ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸ ಜಯಂತಿಯನ್ನು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಮತ್ತು ಶಾಲಾ ಮಕ್ಕಳು ಎಲ್ಲರೂ ಒಟ್ಟಾಗಿ ಕೂಡಿ ಅದ್ಧೂರಿಯಿಂದ ಸಂಭ್ರಮದಿಂದ ಆಚರಣೆ ಮಾಡೋಣ ಎಂದರು. ಅಂದು ಬೆಳಗ್ಗೆ 10 ಗಂಟೆಗೆ ಪಟ್ಟಣ ಪಂಚಾಯಿತಿಯಿಂದ ಬಸ್ ನಿಲ್ದಾಣವರೆಗೆ ಕನಕದಾಸರ ಭಾವಚಿತ್ರವನ್ನು ಕಲಾತಂಡ ಗಳೊಂದಿಗೆ ಮೆರವಣಿಗೆ ಮಾಡಿದ ಬಳಿಕ ಪುರಭವನದಲ್ಲಿ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಹೇಳಿದರು. ಕನಕದಾಸರ ಜೀವನ ಚರಿತ್ರೆಕುರಿತು ಕವಿಶೈಲ ಪತ್ರಿಕೆಯ ಸಂಪಾದಕ ಎಚ್.ಎಂ. ರವಿಕಾಂತ್ ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಪಟ್ಟಣದ ವಿವಿಧ ಕಲಾ ತಂಡಗಳಿಂದ ಕನಕದಾಸರ ಕೀರ್ತನೆಗಳು ಹಾಗೂ ನೃತ್ಯಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹೊಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ  ಗೈರು ಹಾಜರು ಎದ್ದು ಕಾಣುತ್ತಿರುವುದು ಸಾಮಾನ್ಯವಾಗಿದೆ. ಅದ್ದರಿಂದ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು, ಗೈರು ಹಾಜರಾದವರ ಮೇಲೆ ಶಿಸ್ತಿನ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement