ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಂಸ್ಕೃತ ಶ್ರೀಮಂತ, ಸಂಪದ್ಭರಿತ ಭಾಷೆ: ಪುತ್ತಿಗೆ ಶ್ರೀ

Mainashree
Updated On : 15 Nov 2013, 11:42 am

ಶೃಂಗೇರಿ: ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಒಂದಾದ ಸಂಸ್ಕೃತ ಶ್ರೀಮಂತ, ಸಂಪದ್ಭರಿತ ಭಾಷೆಯಾಗಿದೆ ಎಂದು ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಹೇಳಿದರು.
ಪಟ್ಟಣದಲ್ಲಿ ನಡೆಯುತ್ತಿರುವ ಮೂರು ದಿನಗಳ ವಿಶ್ವ ಹೃದಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಾಚೀನ ಕಾಲದಲ್ಲಿ ರಾಜಾಶ್ರಯ ಪಡೆದಿತ್ತು. ಆಡಳಿತ, ವ್ಯವಹಾರ ಭಾಷೆಯೂ ಆಗಿತ್ತು. ಸಾಹಿತ್ಯ, ಸಂಸ್ಕೃತಿಯನ್ನು ಪೋಷಿಸಿ ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿತ್ತು ಎಂದ ಅವರು, ವಿಶ್ವ ಹೃದಯ ಸಮ್ಮೇಳನ ಶೃಂಗೇರಿಯಲ್ಲಿ ನಡೆಯುತ್ತಿರುವುದು ಸಂತಸದ ವಿಷಯ ಎಂದರು.
ಶ್ರೀ ಮಠದ ಆಡಳಿತಾಧಿಕಾರಿ ಡಾ. ವಿ.ಆರ್. ಗೌರೀಶಂಕರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೈತಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ಶ್ರೀಧರ ರಾವ್, ಕೆ.ಎಸ್. ರಮೇಶ್ ಮತ್ಚಿತರರು ಉಪಸ್ಥಿತರಿದ್ದರು.
ಇಂದಿನ ಕಾರ್ಯಕ್ರಮ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥರ ಸಾನ್ನಿಧ್ಯದಲ್ಲಿ ಶುಕ್ರವಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ, ಪಂಜಾಬಿನ ಆನಂದಪುರ ಸಾಹೀಬ್ ಬಾಬಾಜಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕ ಜೀವರಾಜ್ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ಸುಪ್ರಿಂ ಕೋರ್ಟಿನ ನಿವೃತ್ತ ನ್ಯಾಯಾಧೀಶ ಎನ್. ಸಂತೋಷ್ ಹೆಗ್ಡೆ ಭ್ರಷ್ಟಾಚಾರ ವಿರೋಧ ಕುರಿತ ವಿಚಾರಗೋಷ್ಠಿನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement