ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ಸಚಿವ ಆಂಜನೇಯ ಭೇಟಿ

Rashmi Kasaragodu
Updated On : 16 Nov 2013, 11:33 am

ಚಿಕ್ಕಮಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ಶನಿವಾರ ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ 2.15ಕ್ಕೆ ನಡೆಯಲಿರುವ ಜಿಲ್ಲಾ ಬುಡಕಟ್ಟು ಕೃಷಿಕ ಸಂಘದ ವತಿಯಿಂದ ಏರ್ಪಡಿಸಲಾಗಿರುವ ಆದಿವಾಸಿಗಳ ರಾಜ್ಯಮಟ್ಟದ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ಮೀನುಗಾರಿಕೆ ತರಬೇತಿ
ಮೀನುಗಾರಿಕೆ ಇಲಾಖೆ ವತಿಯಿಂದ ಒಳನಾಡು ತರಬೇತಿಯು(ಪುರುಷರಿಗೆ ಮಾತ್ರ) ಮೇಲ್ಕಂಡ ತರಬೇತಿ ಕೇಂದ್ರದಲ್ಲಿ ಪ್ರಾರಂಭವಾಗುವುದು. ಈ ತಂಡದಲ್ಲಿ ಸುಮಾರು 40 ಗ್ರಾಮೀಣ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿ 2 ತಿಂಗಳ ಅವಧಿಯಾಗಿದ್ದು ಪ್ರತಿ ಅಭ್ಯರ್ಥಿಗೆ ಮಾಸಿಕ 1 ಸಾವಿರ ರು. ಶಿಷ್ಯ ವೇತನ ಕೊಡಲಾಗುವುದು. ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನ. ತರಬೇತಿ ಅವಧಿಯಲ್ಲಿ ಮೀನು ಮರಿ ಉತ್ಪಾದನೆ, ಪಾಲನೆ, ಹಂಚಿಕೆ,  ಮೀನು ಸಾಕಣೆ, ಬಲೆ ಹೆಣೆಯುವುದು, ದುರಸ್ತಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ,  ಪಾಲನೆ, ಇತ್ತೀಚಿನ ಬೆಳವಣಿಗೆಗಳು ಮುಂತಾದ ವಿಷಯಗಳಲ್ಲಿ  ತರಬೇತಿ ನೀಡಲಾಗುವುದು ಎಂದು ಮೀನುಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ. ಅರ್ಜಿ  ಮತ್ತು ಹೆಚ್ಚಿನ ಮಾಹಿತಿಗೆ ಸಮೀಪದ ಮೀನುಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸಾಕ್ಷರತಾ ಕಾರ್ಯಕ್ರಮ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಟೌನ್ ಮಹಿಳಾ ಸಮಾಜ ವಿದ್ಯಾ ಸಂಸ್ಥೆ ಹಾಗೂ ವಾರ್ತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಟೌನ್ ಮಹಿಳಾ ಸಮಾಜ ವಿದ್ಯಾ ಸಂಸ್ಥೆ ಆವರಣದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement