ಇಂದು ಕವಿಗೋಷ್ಠಿ, ಸಂವಾದ
ಚಿತ್ರದುರ್ಗ: ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮತ್ತು ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.17ರ ಸಂಜೆ 5.30ಕ್ಕೆ ನಗರದ ಐಶ್ವರ್ಯ ಫೋರ್ಟ್ಸ್ ಸಭಾಂಗಣದಲ್ಲಿ ಕವಿಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಾನ್ನಿಧ್ಯ ಮತ್ತು ಉದ್ಘಾಟನೆಯನ್ನು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ನಿರ್ವಹಿಸಲಿದ್ದು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ. ವೀರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾವ್ಯ ಕುರಿತು ಸಾಹಿತಿ ಡಾ. ಜಯಂತ್ ಕಾಯ್ಕಿಣಿ ಸಂವಾದ ನಡೆಸಲಿದ್ದಾರೆ. ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಸುರೇಶ್ ರಾಜು, ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕಿ ಸತ್ಯಭಾಮಾ ಮತ್ತು ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ಅಧ್ಯಕ್ಷೆ ದಯಾ ಪುತ್ತೂರ್ಕರ್ ಆಗಮಿಸಲಿದ್ದಾರೆ.