ಸ್ವಾತಂತ್ರ್ಯ ಹೋರಾಟಗಾರ ಕೆಂಚೇಗೌಡ ನಿಧನ
ಮೂಡಿಗೆರೆ: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಾಫಿ ಬೆಳೆಗಾರರಾದ ಎಚ್.ಪಿ. ಕೆಂಚೇಗೌಡ (89) ಅವಕು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಮೃತರು ಮಾಜಿ ಸಭಾಪತಿ ಬಿ.ಎಲ್. ಶಂಕರ್ ಅವರ ಮಾವ. ಮೃತರಿಗೆ ನಾಲ್ವರು ಪುತ್ರಿಯರು ಮತ್ತು ಅಪಾರ ಬಂಧು- ಬಳಗ ಇದ್ದಾರೆ.
ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಶಾಸಕ ಬಿ.ಬಿ. ನಿಂಗಯ್ಯ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಎಂ.ಕೆ. ಪ್ರಾಣೇಶ್, ಎಂ.ಎಲ್. ಕಲ್ಲೇಶ್, ಎಂ.ಸಿ. ಸುದರ್ಶನ್, ಡಿ.ಎಂ. ಪುಟ್ಟೇಗೌಡ, ಬಿ.ಎನ್. ಚಂದ್ರಪ್ಪ, ಜಿ.ಎಚ್. ಹಾಲಪ್ಪಗೌಡ, ಬೆಳೆಗಾರರ ಸಂಘದ ಅಧ್ಯಕ್ಷ ಬಿ. ಬಸವರಾಜ್ ಸೇರಿದಂತೆ ಅನೇಕ ಗಣ್ಯರು ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು.