ಇಂದು ಕಳಪೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ
ಚಿಕ್ಕಮಗಳೂರು: ಕಡೂರು- ಚಿಕ್ಕಮಗಳೂರು ರೈಲು ಮಾರ್ಗ ನಿರ್ಮಾಣದ ವೇಳೆ ಆಗಿರುವ ಕಳಪೆ ಕಾಮಗಾರಿ ಮತ್ತು ನೂತನ ರೈಲ್ವೇ ನಿಲ್ದಾಣದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕದಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಂಗಳವಾರ ರೈಲು ನಿಲ್ದಾಣದ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ.
ಕಳಪೆ ಕಾಮಗಾರಿಯನ್ನು ಸರಿಪಡಿಸುವುದರ ಜೊತೆಗೆ ರೈಲು ನಿಲ್ದಾಣದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವಂತೆ ವೇದಿಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ವಾಗದ ಹಿನ್ನಲೆಯಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಅಂದು ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವ ಗಣ್ಯರಿಗೆ ವೇದಿಕೆಯ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ ಎಂದು ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ