ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕೇಂದ್ರಕ್ಕೆ ಯೋಜನಾ ವರದಿ ಸಲ್ಲಿಕೆ: ಸಿದ್ದರಾಮಯ್ಯ

Mainashree
Updated On : 20 Nov 2013, 11:21 am

ಚಿಕ್ಕಮಗಳೂರು: ಕೇಂದ್ರದ ಯೋಜನೆಗಳ ಅನುಷ್ಠಾನಕ್ಕೆ ಬೇಕಾದ ನೆರವನ್ನು ಪಡೆಯಲು ಸದ್ಯದಲ್ಲಿಯೇ ಯೋಜನಾ ವರದಿಯನ್ನು ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಿಕ್ಕಮಗಳೂರಿನ ರೇಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದ ನೂತನ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಸ್ತೆ, ರೇಲ್ವೆ ಮತ್ತು ಪೆಟ್ರೋಲಿಯಂ ವಿಷಯಗಳಿಗೆ ಸಂಬಂಧಿಸಿದಂತೆ ನೆರವು ಕೋರಿ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.  ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರು ಮಾತನಾಡುವಾಗ ಕೇಂದ್ರ ಸರ್ಕಾರದಿಂದ ಯಾವುದಾದರೂ ನೆರವು ಬೇಕಿದ್ದರೆ ಕೇಳಿ, ಇಲ್ಲಿ ಕೇಂದ್ರದ ನಾಲ್ವರು ಸಚಿವರು ಇದ್ದೇವೆ ಎಂದು ಹೇಳಿದ್ದರಿಂದ ಮುಖ್ಯಮಂತ್ರಿ ಮೇಲಿನ ಪ್ರಸ್ತಾಪವಿಟ್ಟರು.
12,000 ಕೋಟಿ ವೆಚ್ಚ: ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ರೇಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ 50/50ರ ಅನುಪಾತದನ್ವಯ 12,000 ಕೋಟಿ ಕೊಡಬೇಕಾಗಿದೆ. ಇದರ ಜತೆಗೆ ರೈತರ ಜಮೀನು ಸ್ವಾಧೀನಪಡಿಸಿಕೊಂಡು ಅವರಿಗೆ ಪರಿಹಾರ ನೀಡಬೇಕು. ಈ ಎರಡು ಕೆಲಸಗಳೂ ರಾಜ್ಯ ಸರ್ಕಾರದಿಂದ ಆಗಬೇಕಾಗಿದೆ. ಭೂಸ್ವಾಧೀನ ವಿಳಂಬವಾದರೆ, ಯೋಜನಾ ವೆಚ್ಚ ಜಾಸ್ತಿಯಾಗಲಿದೆ. ಆಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಹೊರೆ ಬೀಳಲಿದೆ. ಅದುದರಿಂದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಜರೂರಾಗಿ ಮುಗಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement