ಬಾಗಿಲು ಹಾಕಿ ಪ್ರತಿಭಟನೆ
ತರೀಕೆರೆ: ಜಿ.ಪಂ.ಇಂಜಿನಿಯರಿಂಗ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಯಾರೊಬ್ಬರೂ ಅಧಿಕಾರಿಗಳೇ ಇಲ್ಲದಿರುವುದನ್ನು ಮಂಗಳವಾರ ತಾಲೂಕು ಪಂಚಾಯಿತಿ ಸದಸ್ಯ ವಿಜಯಾನಾಯ್ಕ್ ಅವರ ನೇತೃತ್ವದಲ್ಲಿ ಕಚೇರಿ ಬಾಗಿಲು ಹಾಕಿ ಪ್ರತಿಭಟಿಸಲಾಯಿತು.
ಪ್ರತಿಭಟನೆ ನೆಡೆಯುತ್ತಿರುವ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿದ ಅಧಿಕಾರಿಗಳ ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನೆಡೆಯಿತು. ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ಸದಾನಂದ್ ಮತ್ತಿತರರು ಭಾಗವಹಿಸಿದ್ದರು.