ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸುದ್ದಿ ಸಂಕ್ಷೇಪ

Mainashree
Updated On : 20 Nov 2013, 11:23 am

ಗುಂಪು ಘರ್ಷಣೆ: ಇಬ್ಬರಿಗೆ ಗಾಯ
ಚಿಕ್ಕಮಗಳೂರು: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನಗರದ ಮಾರ್ಕೆಟ್ ರಸ್ತೆಯಲ್ಲಿ ಮಂಗಳವಾರ ಎರಡು ಗುಂಪಿನ ನಡುವೆ ಘರ್ಷಣೆ ಸಂಭಸಿದ್ದು, ಇಬ್ಬರಿಗೆ ಗಾಯಗಳಾಗಿವೆ. ರಮೇಶ್ ಹಾಗೂ ನಯಾಜ್ ಎಂಬವರಿಗೆ ಗಾಯಗಳಾಗಿವೆ. ಪ್ರೀತಿಸಿ ಮದುವೆಯಾದ ಯುವಕ, ಯುವತಿ ಎರಡು ವರ್ಷಗಳ ಬಳಿಕ ಇತ್ತೀಚಿಗೆ ತಮ್ಮ ಮನೆಗೆ ಆಗಮಿಸಿದ್ದು, ಈ ದ್ವೇಷದಿಂದಾಗಿ ಯುವಕರ ಗುಂಪೊಂದು ರಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಕುಪಿತಗೊಂಡ ಮತ್ತೊಂದು ಗುಂಪಿನ ಯುವಕರು ಕೆಲವು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗಾಯಗೊಂಡವರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾರ್ಯದರ್ಶಿ ಸಾವು
ಮಂಗಳೂರು: ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವ ಅವರ ಆಪ್ತ ಕಾರ್ಯದರ್ಶಿ ಪ್ರಕಾಶ್(51)ಹೃದಯಾಘಾತದಿಂದ ಮಂಗಳವಾರ ಸಾವಿಗೀಡಾಗಿದ್ದಾರೆ. ಬಿಜೈ ಕಾಪಿಕಾಡ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅವರಿಗೆ ಮುಂಜಾನೆ ಹಠಾತ್ ಎದೆ ನೋವು ಕಾಣಿಸಿತ್ತು. ಬಳಿಕ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೂಲತಃ ಚಿಕ್ಕಮಗಳೂರು ನಿವಾಸಿ. ಇಲ್ಲಿನ ಡಿಡಿಪಿಐ ಕಚೇರಿಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಐದು ವರ್ಷ ಕಾಲ ಕರ್ತವ್ಯ ನಿರ್ವಹಿಸಿ 15 ದಿನ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
ಶಾರದಾ ಪೀಠಕ್ಕೆ ದೇವೇಗೌಡ ಭೇಟಿ
ಶೃಂಗೇರಿ: ಇಲ್ಲಿನ  ಶಾರದಾ ಪೀಠಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳವಾರ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ತೋರಣಗಣಪತ್, ಶಂಕರಾಚಾರ್ಯ, ಸುಬ್ರಮಣ್ಯ, ಶ್ರೀ ವಿದ್ಯಾಶಂಕರ ದೇವಾಲಯಗಳಿಗೆ ತೆರಳಿ ದರ್ಶನ ಪಡೆದರು. ನಂತರ ನರಸಿಂಹ ವನದಲ್ಲಿನ ಗುರು ನಿವಾಸಕ್ಕೆ ತೆರಳಿ ಜಗದ್ಗುರು ಶ್ರೀ ಭಾರತೀ ತೀರ್ಥರನ್ನ ಭೇಟಿ ಮಾಡಿ ಆರ್ಶೀವಾದ ಪಡೆದರು.
ಶಾರದಾ ಪೀಠಕ್ಕೆ ಸಚಿವ ಮುನಿಯಪ್ಪ ಭೇಟಿ
ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠಕ್ಕೆ ಸೋಮವಾರ ಕೇಂದ್ರ ಕೈಗಾರಿಕಾ ಸಚಿವ ಮುನಿಯಪ್ಪ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ನಂತರ ತೋರಣಗಣಪತಿ, ಶ್ರೀ ಶಂಕರಾಚಾರ್ಯ ದೇವಾಲಯ, ಶ್ರೀ ವಿದ್ಯಾಶಂಕರ ದೇವಾಲಯಕ್ಕೆ ತೆರಳಿ ದರ್ಶನ ಪಡೆದರು. ನಂತರ ನರಸಿಂಹವನದಲ್ಲಿನ ಗುರುನಿವಾಸಕ್ಕೆ ತೆರಳಿ ಶ್ರೀ ಭಾರತೀ ತೀರ್ಥರನ್ನು ಭೇಟಿ ಮಾಡಿ ಆರ್ಶಿವಾದ ಪಡೆದು ನಂತರ ತೆರಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement