ಕ್ಲಸ್ಟರ್ ಪ್ರತಿಭಾ ಕಾರಂಜಿ
ಕ.ಪ್ರ.ವಾರ್ತೆ, ಕೊಪ್ಪ, ನ.22
ಪಠ್ಯ ಮತ್ತು ಪಠ್ಯೇತರ ಚುಟುವಟಿಕೆಗಳಿಗೆ ಶಿಕ್ಷಕರು ಮತ್ತು ಸ್ಥಳೀಯರು ಸೇರಿ ಪೂರಕ ವಾತವರಣ ಸೃಷ್ಟಿಸಿದಾಗ ಮಾತ್ರ ವಿದ್ಯಾರ್ಥಿಗಳು ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ತಾಪಂ ಸದಸ್ಯ ಎಚ್.ಡಿ. ಜಯಂತ್ ಅಭಿಪ್ರಾಯಪಟ್ಟರು.
ಶುಕ್ರವಾರ ತಾಲೂಕಿನ ಕಾಳನಾಯಕನಕಟ್ಟೆಯ ಸ.ಹಿ.ಪ್ರಾ. ಶಾಲೆಯಲ್ಲಿ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಹೊರಹೊಮ್ಮಲು ಸರ್ಕಾರ ಪ್ರತಿಭಾ ಕಾರಂಜಿ, ಕ್ರೀಡಾಕೂಟ, ಕಲಿಕೋತ್ಸವಗಳಂತಹ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದರು.
ತಾಲೂಕು ಶಿಕ್ಷಣ ಸಮನ್ವಯ ಅಧಿಕಾರಿ ಅರ್.ಡಿ. ರವೀಂದ್ರ ಮಾತನಾಡಿ, ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಯ ಭಾಗವಾದ ಪ್ರತಿಭಾ ಕಾರಂಜಿಗೆ ರಾಜ್ಯ ಸರ್ಕಾರ ಕೋಟ್ಯಂತರ ರು. ನೀಡಿ ಕಾರ್ಯಕ್ರಮ ನಡೆಸುತ್ತಿದೆ. ಎಲ್ಲಾ ಶಾಲೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅರವಿಂದ ಜೋಯಿಸ್ ವಹಿಸಿದ್ದರು. ತಾಪಂ ಅಧ್ಯಕ್ಷರಾದ ಪದ್ಮಾವತೀ ರಮೇಶ್, ಉಪಾಧ್ಯಕ್ಷ ಪೂರ್ಣಚಂದ್ರ, ಸುಭದ್ರಮ್ಮ, ಸಿ.ಅರ್.ಪಿ. ತಿಪ್ಪೇಶ್,ರಾಜಪ್ಪ, ಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಮೊದಲಾದವರು ಇದ್ದರು.