ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆ ಸುವರ್ಣ ಮಹೋತ್ಸವ

Lingaraj Badiger
Updated On : 23 Nov 2013, 10:42 am

ಚಿಕ್ಕಮಗಳೂರು: ನಗರದ ಧರ್ಮಕ್ಷೇತ್ರದ ಸುವರ್ಣ ಮಹೋತ್ಸವ ಹಾಗೂ ವಿಶ್ವಾಸ ವರ್ಷದ ಸಮಾರೋಪ ಸಮಾರಂಭ ನ.24 ರಂದು ಇಲ್ಲಿನ ಸಂತ ಜೋಸೆಫರ ಪ್ರಧಾನಾಲಯ ಆವರಣದಲ್ಲಿ ನಡೆಯಲಿದೆ.
ಅಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ. ಟಿ. ಅಂತೋಣಿಸ್ವಾಮಿ ವಹಿಸಲಿದ್ದು, ಐಎಫ್ಕೆಸಿಎ ಅಧ್ಯಕ್ಷ ರೊನಾಲ್ಡ್ ಕೊಲಾಸೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿ ಫಾದರ್ ಪ್ಯಾಟ್ರಿಕ್ ಜಾನೆಸ್ ರಾವ್ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು. ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್, ರಾಜ್ಯದ ಗೃಹ ಸಚಿವ ಕೆ.ಜೆ. ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್, ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಲ್ಲಾಧಿಕಾರಿ ಶೇಖರಪ್ಪ ಹಾಗೂ ಎಸ್ಪಿ ಅಭಿಷೇಕ್ ಗೋಯಲ್ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement