ಸಿಎಂ ಹೇಳಿಕೆಗೆ ಬಿಜೆಪಿ ಖಂಡನೆ
ಶೃಂಗೇರಿ: ಮಲೆನಾಡಿನಲ್ಲಿ ಭಯೋತ್ಪಾದಕತೆ ಜಾಲದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿರುವುದನ್ನು ಬಿಜೆಪಿ ನಗರ ಮೋರ್ಚದ ಅಧ್ಯಕ್ಷ ಮುರಳೀಧರ ಪೈ ಖಂಡಿಸಿದ್ದಾರೆ. ಇದು ಗಂಭೀರವಾದ ವಿಚಾರವಾಗಿದ್ದು, ಇಂತಹ ವಿಷಯದ ಬಗ್ಗೆ ನಿರ್ಲಕ್ಷ್ಯ ಖಂಡನೀಯ ಎಂದರು.
ಯಾಸಿನ್ ಭಟ್ಕಳ್ ಯಾರೋ ನನಗೆ ಗೊತ್ತಿಲ್ಲ. ಆ ಬಗ್ಗೆ ನನಗೆ ಕೇಳಬೇಡಿ ಎಂಬ ಉಡಾಫೆಯ ಉತ್ತರ ಶೋಭೆ ತರುವುದಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿ ಇಂತಹ ಹೇಳಿಕೆ ನೀಡಿದ್ದಾರೆ. ಇದು ದೇಶದ ಭದ್ರತೆಯ ವಿಚಾರ. ಗಂಭೀರವಾಗಿ ಪರಿಗಣಿಸಬೇಕು. ಪಕ್ಷ ಇಂತಹ ಹೇಳಿಕೆಯನ್ನು ಖಂಡಿಸುತ್ತದೆ. ಇಂತಹ ಬೇಜವಾಬ್ದಾರಿತನ ಹೇಳಿಕೆ ನೀಡುವುದನ್ನು ನಿಲ್ಲಿಸಿ ಶಾಂತಿ ಸುವ್ಯವಸ್ಥೆ ಕಾಪಾಡುವತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.