ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಟ್ಟಡ ತೆರವು ಕಾರ್ಯ ಪರಿಶೀಲನೆ

Vishwanath S
Updated On : 24 Nov 2013, 3:03 am

ಕ.ಪ್ರ.ವಾರ್ತೆ ,  ಚಿಕ್ಕಮಗಳೂರು ,  ನ. 23
ವಿಶೇಷ ಅನುದಾನದಡಿಯಲ್ಲಿ ನಗರದ ಎಂಜಿ ರಸ್ತೆ ಹಾಗೂ ಮಾರ್ಕೆಟ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಡಿಸೆಂಬರ್ ಮೊದಲ ವಾರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಸಿ.ಟಿ. ರವಿ ಹೇಳಿದರು.
ಇಲ್ಲಿನ ಮಾರ್ಕೆಟ್ ರಸ್ತೆಗೆ ಶನಿವಾರ ಭೇಟಿ ನೀಡಿದ ಶಾಸಕರು, ಕಟ್ಟಡಗಳ ತೆರವು ಕಾರ್ಯ ವೀಕ್ಷಿಸಿ, ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಗರದ ಎಂಜಿ ರಸ್ತೆ ಹಾಗೂ ಮಾರ್ಕೆಟ್ ರಸ್ತೆಗಳಿಗೆ ಕಾಂಕ್ರಿಟ್ ಹಾಕಲಾಗುವುದು. ಇದರ ಜತೆಗೆ ನೆಲದ ಒಳ ಭಾಗದಲ್ಲಿ ಕೇಬಲ್ ಅಳವಡಿಸುವುದು ಸುಸಜ್ಜಿತವಾಗಿ ಫುಟ್‌ಪಾತ್ ಸೇರಿದಂತೆ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಎರಡು ರಸ್ತೆಗಳಿಗೆ 20 ಕೋಟಿ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಗುತ್ತಿಗೆದಾರರ ಕೈಗೆ ಕಾರ್ಯಾದೇಶ ತಲುಪಿದ ತಕ್ಷಣವೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.
ಮಾರ್ಕೆಟ್ ರಸ್ತೆ ಅಗಲೀಕರಣ ಮಾಡಲಾಗುತ್ತಿದ್ದು, ಕೆಲವರು ತಮ್ಮ ಕಟ್ಟಡ ತೆರವುಗೊಳಿಸಿ, ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟಿದ್ದಾರೆ. ಇನ್ನು ಕೆಲವೆಡೆ ಕಟ್ಟಡಗಳ ತೆರವು ಕಾರ್ಯ ಬಾಕಿ ಇದ್ದು, ಮಾಲೀಕರು ಕೂಡಲೇ ತಮ್ಮ ಕಟ್ಟಡ ತೆರವುಗೊಳಿಸಿ ಕಾಮಗಾರಿಗೆ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಇಲ್ಲಿ ಉತ್ತಮ ರಸ್ತೆ ನಿರ್ಮಾಣಗೊಳ್ಳಲಿದೆ ಎಂದರು.
ಇದೇ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪುಷ್ಪರಾಜ್, ಮುತ್ತಯ್ಯ, ಬಿಜೆಪಿ ನಗರಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement