ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕುಡಿವ ನೀರು ಸರಬರಾಜಿಗೆ ಆದ್ಯತೆ: ಶಾಸಕ

Vishwanath S
Updated On : 24 Nov 2013, 3:03 am

ಕ.ಪ್ರ.ವಾರ್ತೆ ,  ತರೀಕೆರೆ ,  ನ. 23
ತಾಲೂಕಿನಲ್ಲಿ ಕುಡಿಯುವ ನೀರು ಸರಬರಾಜಿಗೆ ಮೊದಲ ಆದ್ಯತೆ ಕೊಡಲಾಗುವುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದ್ದಾರೆ.
ಶನಿವಾರ ತಾಪಂ ಸಭಾಂಗಣದಲ್ಲಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶಕುಂತಲ ನಾಗರಾಜ್ ಅವರಿಗೆ ಏರ್ಪಾಡಾಗಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನಲ್ಲಿ ಹಿಂಗಾರು ಮಳೆ ಬಾರದೆ ತೊಂದರೆಯಾಗಿದೆ. ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶ ಗುರುತಿಸಿ ತೊಂದರೆ ಬರುವ ಮುಂಚೆಯೇ ಅದನ್ನು ಪರಿಹರಿಸಬೇಕು. ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಬೇಕು. ತಾಲೂಕಿನಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕೂಡಲೇ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ನೂತನ ಅಧ್ಯಕ್ಷೆ ಶಕುಂತಲ ನಾಗರಾಜ್, ನಿಕಟಪೂರ್ವ ಅಧ್ಯಕ್ಷೆ ಶಾಂತ ಗುರುಮೂರ್ತಿ, ಜಿಪಂ ಸದಸ್ಯ ಕೆ.ಪಿ. ಕುಮಾರ್, ತಾಪಂ ಸದಸ್ಯರಾದ ಅನ್ಬು, ಸೀತಾರಾಂ, ರಾಜ್‌ಕುಮಾರ್, ಶಾರದ ವೇಲುಮುರುಗನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಘನಿ ಅನ್ವರ್, ಕೆ.ಆರ್. ಧ್ರುವಕುಮಾರ್, ದೋರನಾಳು ಪರಮೇಶ್, ಹರಳಪ್ಪ, ರವಿಶಾನುಬೋಗ್ ಮತ್ತಿತರರು ಮಾತನಾಡಿದರು. ಮಂಜುನಾಥ್, ಇಒ ದೇವರಾಜಪ್ಪ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement