ಸೇವೆ ಕಾಯಂಗೆ ಒತ್ತಾಯಿಸಿ ಮನವಿ
ತರೀಕೆರೆ: 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವಿದ್ಯುತ್ ಪ್ರತಿನಿಧಿಗಳ ಸೇವೆಯನ್ನು ಕಾಯಂಗೊಳಿಸಬೇಕೆಂದು ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ, ರಾಜ್ಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಒಕ್ಕೂಟ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಅರ್ಪಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷರು ತಿಳಿಸಿದ್ದಾರೆ.
ನ.26ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಹಲಗಾ ಕ್ರಾಸ್‌ನಿಂದ (ಸೇತುವೆ) ಸುವರ್ಣ ವಿಧಾನ ಸೌಧದವರೆಗೆ ಶಾಂತಿಯುತ ಮೆರವಣಿಗೆ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಆಗಮಿಸಿ ಶಾಂತಿಯುತ ಮೆರವಣಿಗೆಯನ್ನು ಯಶಸ್ವಿಗೊಳಿಸಿ ಸಹಕರಿಸಬೇಕೆಂದು ಕೋರಲಾಗಿದೆ.
ಡಿ.1ರಂದು ಮಕ್ಕಳ ಪುಸ್ತಕ ಸಮ್ಮೇಳನ
ಶೃಂಗೇರಿ: ಪಟ್ಟಣದ ಮಾನಗಾರು ಜ್ಞಾನಭಾರತಿ ವಿದ್ಯಾಕೇಂದ್ರದ ಆವರಣದಲ್ಲಿ ಡಿಸೆಂಬರ್ 1 ರಂದು ಮಕ್ಕಳ ಪುಸ್ತಕ ಸಮ್ಮೇಳನ ನಡೆಯಲಿದೆ. ಅಂದು ಬೆಳಿಗ್ಗೆ ಆಚಾರ್ಯ ಶಂಕರ ಸಭಾಂಗಣದಲ್ಲಿ ಉದ್ಘಾಟನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ನಂತರ ವಿವಿಧ ಗೋಷ್ಠಿಗಳು ನಡೆಯಲಿದೆ. ಮಕ್ಕಳ ಗೋಷ್ಠಿ ನಡೆಯಲಿವೆ.
ರಂಗಕರ್ಮಿ ರವಿಕುಮಾರ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಸಮ್ಮೇಳನದಲ್ಲಿ ಮಕ್ಕಳ ಪುಸ್ತಕಗಳ ಪ್ರದರ್ಶನ, ಮಾರಾಟ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ನವೆಂಬರ್ 30ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.