ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಹಕ್ಕಿನ ಬಗ್ಗೆ ಜಾಗೃತರಾಗಲು ಮಹಿಳೆಯರಿಗೆ ಸಲಹೆ

Lingaraj Badiger
Updated On : 26 Nov 2013, 10:49 am

ಕ.ಪ್ರ.ವಾರ್ತೆ, ತರೀಕೆರೆ, ನ.25 ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಎಂದು ತರೀಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಿದಾಯತ್ ಉಲ್ಲಾ ಷರೀಫ್‌ಹೇಳಿದರು.
ಅವರು, ಸೋಮವಾರ ವಿಕಸನ ಸಂಸ್ಥೆ, ಕಾನೂನು ಸೇವಾ ಪ್ರಾಧಿಕಾರ, ಹಂಗರ್ ಪ್ರಾಜೆಕ್ಟ್ ಬೆಂಗಳೂರು  ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ದೌರ್ಜನ್ಯದ ವಿರುದ್ಧ ತಾಲೂಕು ಮಟ್ಟದ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಜಾಗೃತಿ ಆಂದೋಲನ: ಮಹಿಳೆಯರ ಮೇಲೆ ಶತಶತಮಾನಗಳಿಂದ ಶೋಷಣೆ ನಡೆಯುತ್ತಿದೆ. ಮಹಿಳೆಯರ ಮೇಲೆ ದೌರ್ಜನ್ಯ ತಡೆಗೆ ಕಾನೂನು ಜಾರಿಗೆ ಬಂದಿದೆ. ಪುರುಷರಂತೆ ಮಹಿಳೆಯರಿಗೂ ಕಾನೂನು ಇದ್ದು, ಪುರುಷರಂತೆ ಗೌರವದಿಂದ ಬದುಕುವ ಹಕ್ಕು ಮಹಿಳೆಯರಿಗಿದೆ. ಮಹಿಳೆಯರ ಹಕ್ಕಿನ ಬಗ್ಗೆ ಜಾಗೃತಿ ಶಿಬಿರ ಆಂದೋಲನದ ರೀತಿಯಲ್ಲಿ ನಡೆಯಬೇಕು ಎಂದು ಅವರು ತಿಳಿಸಿದರು. ವಿಕಸನ ಸಂಸ್ಥೆ ಅಧ್ಯಕ್ಷ ಎ.ಎಂ. ವರ್ಗೀಸ್ ಕ್ಲೀಟಸ್ ಮಾತನಾಡಿ, ಪ್ರತಿಯೊಂದು ಹಳ್ಳಿಗಳಲ್ಲೂ ಇಂತಹ ಶಿಬಿರ  ಆಯೋಜಿಸಲಾಗುತ್ತಿದೆ. ಮಹಿಳೆಯರನ್ನು ಕಡೆಗಣಿಸಬಾರದು, ಮಹಿಳೆಯರಿಗೆ ಸಂಬಂಧಿಸಿದ ಕೇಸುಗಳಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
17 ಜಿಲ್ಲೆಯಲ್ಲಿ ಸುಗ್ರಾಮ: ಸುಗ್ರಾಮ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸುನೀತಾ ಮಾತನಾಡಿ, ಇದು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ, ಮಹಿಳೆಯರಲ್ಲಿ ನಾಯಕತ್ವ ತರಬೇಕು. ರಾಜ್ಯದ 17 ಜಿಲ್ಲೆಗಳಲ್ಲಿ ಸುಗ್ರಾಮ ಯೋಜನೆ ಜಾರಿಯಲ್ಲಿದೆ ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಶಿವಪ್ರಸಾದ್, ತಹಸೀಲ್ದಾರ್ ಶಿವಕುಮಾರ್ ಮಾತನಾಡಿದರು.
ಕಿರಿಯ ಸಿವಿಲ್ ನ್ಯಾಯಾಧೀಶ ಜಯಲಕ್ಷ್ಮಿ, ಸರ್ಕಾರಿ ಸಹಾಯಕ ಅಭಿಯೋಜಕ ಭಾಸ್ಕರ್, ವಕೀಲ  ಎಸ್. ಸುರೇಶ್ ಚಂದ್ರ, ಟಿ.ಕೆ. ನಂದೀಶ್ವರಯ್ಯ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬೀದಿನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement