ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ

Srinivasa Murthy VN
Updated On : 27 Nov 2013, 11:20 am

ಮೂಡಿಗೆರೆ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸುವ 2 ದಿನಗಳ ಕಾನೂನು ಸಾಕ್ಷರತಾ ರಥಯಾತ್ರೆಗೆ ಪ್ರಧಾನ ಸಿವಿಲ್ ನ್ಯಾಯಾಧೀಶ ಪದ್ಮಪ್ರಸಾದ್ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಕ್ಕಮಗಳೂರು, ತಾಲೂಕು ಸೇವಾ ಸಮಿತಿ, ವಕೀಲರ ಸಂಘ, ಆರಕ್ಷಕ, ಆರೋಗ್ಯ, ಸಮಾಜ ಕಲ್ಯಾಣ, ಶಿಕ್ಷಣ ಇಲಾಖೆ, ತೋಟಗಾರಿಕಾ ಮಹಾವಿದ್ಯಾಲಯ, ಜೆ.ಎಸ್. ಶಾಲೆ, ಹೊಯ್ಸಳ ಪ್ರೌಢಶಾಲೆ ಗೋಣಿಬೀಡು, ಸರ್ಕಾರಿ ಪ್ರೌಢಶಾಲೆ ಗೌಡಹಳ್ಳಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಿದರಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾನೂನು ಸಾಕ್ಷರತಾ ಕಾರ್ಯಕ್ರಮದ ಅಂಗವಾಗಿ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬ ನಾಗರಿಕರು ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಮತ್ತು ಅದರಂತೆ ನಡೆದುಕೊಂಡು ಕಾನೂನನ್ನು ಗೌರವಿಸಬೇಕು. ಪ್ರತಿಯೊಬ್ಬ ನಾಗರಿಕನಿಗೂ ಶೋಷಣೆಯ ವಿರುದ್ಧ ಹೋರಾಡಲು ಶಕ್ತರಾಗುವಂತೆ ಮಾಡಲು ಇರುವ ಸಾಧನಗಳಲ್ಲಿ ಕಾನೂನು ಅತ್ಯುತ್ತಮವಾದುದು ಎಂದರು.
ಕಾನೂನಿನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾನೂನು ರಥ ಆಗಮಿಸಿದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಚ್.ಎಂ. ಉಮೇಶ್ ವಹಿಸಿದ್ದರು. ಹಿರಿಯ ವಕೀಲ  ಎಂ.ಎಸ್. ಗೋಪಾಲಗೌಡ ಜನತಾ ನ್ಯಾಯಾಲಯದ ಕಾರ್ಯವೈಖರಿ ಹಾಗೂ ಜನತೆ ಸದುಪಯೋಗಗಳ ಬಗ್ಗೆ ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕ ಅರುಣ್, ವಕೀಲ ನಟರಾಜ್, ಪ್ರಸನ್ನ ಕುಮಾರ್, ಸುರೇಂದ್ರ  ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement