'ಸರ್ಕಾರದ ಸವಲತ್ತು ಸದುಪಯೋಗ ಪಡಿಸಿಕೊಳ್ಳಿ'
ಚಿಕ್ಕಮಗಳೂರು: ಸರ್ಕಾರದ ಸವಲತ್ತುಗಳನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಬೇಕು. ಗ್ರಾಮಕ್ಕೆ ಬಿಡುಗಡೆಯಾಗುವ ಅನುದಾನದಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ, ಚರಂಡಿಗಳ ವ್ಯವಸ್ಥೆಯನ್ನು ಗ್ರಾಮಸ್ಥರು ಉತ್ತಮವಾಗಿ ನೋಡಿಕೊಳ್ಳಬೇಕೆಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.
ಇತ್ತೀಚೆಗೆ ಆವತಿ ಹೋಬಳಿಯ ಸಿರಗೂರು ಹರಿಜನ ಕಾಲೋನಿಗೆ ಹೊಸ ಟ್ರಾನ್ಸ್ಫಾರ್ಮರ್ ಉದ್ಘಾಟಿಸಿ ಮಾತನಾಡಿದ ಅವರು, ಹರಿಜನ ಕಾಲೋನಿಗಳಲ್ಲಿ ಕಾಂಕ್ರಿಟ್ ರಸ್ತೆಗೆ ಹೆಚ್ಚಿನ ಗಮನ ನೀಡಿ ಗುಣಮಟ್ಟದ ಕೆಲಸ ಮಾಡಲಾಗುತ್ತಿದೆ. ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರು ಹೆಚ್ಚಿನ ಮಾಹಿತಿ ಪಡೆದು ಅದರ ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ್, ಗ್ರಾಮಸ್ಥರಾದ ದೇವಿಶೆಟ್ಟರು, ನಿಂಗೇಗೌಡ, ನಾಗರಾಜ್ ಉಪಸ್ಥಿತರಿದ್ದರು.