ಸ್ವ ಉದ್ಯೋಗ ತರಬೇತಿ ಸಂಸ್ಥೆಗೆ ರಾಷ್ಟ್ರ ಪ್ರಶಸ್ತಿ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಸಮೀಪದಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಕಾಬ್‌ಸೆಟ್ ಸಂಸ್ಥೆ 2012-13 ರ ಸಾಲಿನ ಸಾಧನೆಗಾಗಿ ಭಾರತ ಸರ್ಕಾರ, ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಮೆಚ್ಚುಗೆಗೆ ಪಾತ್ರವಾಗಿದ್ದು, ಎರಡನೆಯ ಬಾರಿಗೆ ಅತ್ಯುತ್ತಮ ಸ್ವ ಉದ್ಯೋಗ ತರಬೇತಿ ಸಂಸ್ಥೆ ಪ್ರಶಸ್ತಿಗೆ ಪಾತ್ರವಾಗಿದೆ. ನ.21 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತ್ಯುತ್ತಮ ಸ್ವ ಉದ್ಯೋಗ ತರಬೇತಿ ಸಂಸ್ಥೆ ಪ್ರಶಸ್ತಿಯನ್ನು ಕಾರ್ಪೋರೇಷನ್ ಬ್ಯಾಂಕ್ ಮುಖ್ಯ ಕಚೇರಿಯ ಆದ್ಯತಾ ರಂಗ ವಿಭಾಗದ ಮಹಾ ಪ್ರಬಂಧಕರಾದ ಲಕ್ಷ್ಮೀನಾಥ ರೆಡ್ಡಿ ಮತ್ತು ಕಾರ್ಪೋರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ, ಚಿಕ್ಕಮಗಳೂರು ಸಂಸ್ಥೆಯ ನಿರ್ದೇಶಕ ಕೆ.ಎಸ್. ಸತ್ಯೇಶ ಅವರು ಸ್ವೀಕರಿಸಿದರು.
ತರಬೇತಿ ಕಾರ್ಯಕ್ರಮ
ಚಿಕ್ಕಮಗಳೂರು: ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಮಾನ್ಯ ಮಾಡುವ ಅರಣ್ಯ ಹಕ್ಕು ಯೋಜನೆ ಅನುಷ್ಠಾನ ಹಾಗೂ ಸಮುದಾಯದ ಹಕ್ಕು ಮಾನ್ಯ ಮಾಡುವ ಕುರಿತು ನ.29 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.