ಡಿ.2 ದೀಪೋತ್ಸವ
ನರಸಿಂಹರಾಜಪುರ: ಅಗ್ರಹಾರದ ಉಮಾ ಮಹೇಶ್ವರ ದೇವಸ್ಥಾನದ ಲಕ್ಷ ದೀಪೋತ್ಸವ ಸಮಿತಿಯ ಆಶ್ರಯದಲ್ಲಿ 21 ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವು ಡಿಸೆಂಬರ್ 2 ರ ಸೋಮವಾರ ನಡೆಯಲಿದೆ. ವೇ.ಬ್ರ.ವಿ.ಎಸ್. ಕೃಷ್ಣ ಭಟ್ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ 9 ರಿಂದ ಉಮಾ ಮಹೇಶ್ವರ ದೇವರಿಗೆ ಏಕದಶವಾರ ರುದ್ರ ಪಂಚಾಮೃತ ಅಭಿಷೇಕ, ನಡೆಯಲಿದೆ. ರಾತ್ರಿ 8 ಗಂಟೆಗೆ ಲಕ್ಷ ದೀಪೋತ್ಸವ ಉದ್ಘಾಟನೆಗೊಳ್ಳಲಿದೆ ಎಂದು ತಹಸೀಲ್ದಾರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
ದೀಪೋತ್ಸವ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಯಡದಾಳು ಗ್ರಾಮದ ಗುತ್ತುಳಿಕೆ ಚೌಡೇಶ್ವರಿ, ನಾಗಬ್ರಹ್ಮ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.