ಮಲ್ಲಂದೂರಿನಲ್ಲಿ ಹಳ್ಳಿ ಹಬ್ಬ
ಚಿಕ್ಕಮಗಳೂರು: ತಾಲೂಕಿನ ಮಲ್ಲಂದೂರಿನಲ್ಲಿ ಡಿಸೆಂಬರ್ 1 ರಂದು ಹಳ್ಳಿ ಹಬ್ಬ ಕಾರ್ಯಕ್ರಮ ನಡೆಯಲಿದೆ. ಕೃಷಿಕ ಪತ್ರಿಕೆಯ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಉತ್ತಮ ಕಾಫಿ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಾರ್ಯಕ್ರಮದ ಸಂಘಟಕರಾದ ದಿನೇಶ್ ದೇವವೃಂದ ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು. ಕಾಫಿ ಬೆಳೆಗಾರರಾದ ಗೌರಮ್ಮ ಬಸವೇಗೌಡ ಅವರು ಅಂದು ಬೆಳಿಗ್ಗೆ 9 ಗಂಟೆಗೆ ಹಳ್ಳಿ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಆವತಿ ಹೋಬಳಿಯ ಬೆಳೆಗಾರರ ಸಂಘದ ಅಧ್ಯಕ್ಷ ವಸಂತೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಕೃಷಿ ಸಚಿವ ಕೃಷ್ಣ ಭೈರೇಗೌಡ, ಸಾವಯವ ಕೃಷಿ ತಜ್ಞರಾದ ನಾರಾಯಣ ರೆಡ್ಡಿ, ಕಾಫಿ ಮಂಡಳಿ ಅಧ್ಯಕ್ಷ ಜಾವೇದ ಅಕ್ತರ್, ಮಾಜಿ ಸಚಿವ ಡಾ. ಬಿ.ಎಲ್. ಶಂಕರ್, ಕಾಫಿ ಬೆಳೆಗಾರರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಉತ್ತಮ್ಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಜಯರಾಮ್ ದೇವವೃಂದ, ಉತ್ತಮ್ಗೌಡ, ಗಿರೀಶ್ ಹೊಲದಗದ್ದೆ ಉಪಸ್ಥಿತರಿದ್ದರು.