ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಟೆಲಿಕಾಂ ಅದಾಲತ್

Rashmi Kasaragodu
Updated On : 7 Apr 2014, 11:13 am

ಚಿಕ್ಕಮಗಳೂರು: ಭಾರತ ಸಂಚಾರ ನಿಗಮ ನಿಯಮಿತ ವತಿಯಿಂದ ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ಟೆಲಿಕಾಂ ಅದಾಲತ್ ಆಯೋಜಿಸಲಾಗಿದೆ. ಗ್ರಾಹಕರು, ತಮ್ಮ ಪಿರ್ಯಾದುಗಳನ್ನು ಏ. 21ರೊಳಗೆ ಟೆಲಿಕಾಂ ಅದಾಲತ್‌ಗೆ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಸಂಪರ್ಕಾಧಿಕಾರಿ, ಜಿಲ್ಲಾ ಮಹಾ ಪ್ರಬಂಧಕರ ಕಚೇರಿ, ಬಿಎಸ್‌ಎನ್‌ಎಲ್ ಬೆಲ್ಟ್ ರಸ್ತೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಪುನಶ್ಚೇತನ ಶಿಬಿರ
ಚಿಕ್ಕಮಗಳೂರು: ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವತಿಯಿಂದ ಜಿಲ್ಲಾ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್‌ಗಳ ಒಂದು ದಿನದ ಪುನಶ್ಚೇತನ ಶಿಬಿರವನ್ನು ಏ. 7 ರಂದು ಬೆಳಗ್ಗೆ 10 ಗಂಟೆಗೆ ನಗರದ ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಭವನ, ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್. ಷಡಕ್ಷರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಚ್ಚಿದಾನಂದ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಮಂಜುನಾಥ್ ಭಾಗವಹಿಸಲಿದ್ದಾರೆ.
ವೇದಿಕೆ ಉದ್ಘಾಟನೆ
ಶಿವಮೊಗ್ಗ: ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೋಷಕ ಹಾಗೂ ಅಧ್ಯಾಪಕರ ವೇದಿಕೆಯ ಕಾರ್ಯಕ್ರಮವನ್ನು ಸಹ್ಯಾದ್ರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಶಶಿರೇಖಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾಗತೀಕರಣದ ಓಟದಲ್ಲಿ ನಮ್ಮ ಯುವ ಜನಾಂಗ ಪಾಶ್ಚಿಮಾತ್ಯ ಸಂಸ್ಕೃತಿಯ ಅಂಧಾನು ಕರಣೆಯಲ್ಲಿ ತೊಡಗಿದ್ದು, ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದು, ಇದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.ಹೆಚ್ಚು ಹಣ ನೀಡಬೇಡಿ: ಎಷ್ಟೇ ಕೆಲಸದ ಒತ್ತಡವಿದ್ದರೂ ಪೋಷಕರು ಮಕ್ಕಳೊಂದಿಗೆ ಪ್ರೀತಿಯಿಂದ ಸಮಯವನ್ನು ಕಳೆಯಬೇಕು, ಪತಿ-ಪತ್ನಿಯರಲ್ಲಿ ಎಷ್ಟೇ ಭಿನ್ನಾಭಿಪ್ರಾಯವಿದ್ದರೂ ಅದನ್ನು ಮಕ್ಕಳ ಎದುರಿನಲ್ಲಿ ಜಗಳವಾಡಿ ತೋರಿಸಿಕೊಳ್ಳಬಾರದು. ಅಗತ್ಯಕ್ಕಿಂತ ಹೆಚ್ಚು ಹಣವನ್ನು ಮಕ್ಕಳಿಗೆ ಕೊಟ್ಟರೆ ನಮ್ಮ ಮಕ್ಕಳನ್ನು ನಾವೇ ದಾರಿ ತಪ್ಪಿಸಿದಂತಾಗುತ್ತದೆ ಎಂದರು. ಪ್ರೊ. ಎಂ.ಕೆ. ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಾ ಕೆ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಲಕ್ಷ್ಮಿ ಪ್ರಾರ್ಥಿಸಿದರೆ, ಹೇಮಾವತಿ ಎಲ್ಲರನ್ನೂ ಸ್ವಾಗತಿಸಿದರು. ಪವಿತ್ರ ವಂದಿಸಿದರೆ, ದಿವ್ಯ ಈ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement