ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ದೇವೇಗೌಡರ ಗೆಲವು ಖಚಿತ

Rashmi Kasaragodu
Updated On : 7 Apr 2014, 11:10 am

ಕಡೂರು: ಕಾಂಗ್ರೆಸ್ ಸರ್ಕಾರದ ಸರಣಿ ಭ್ರಷ್ಟಾಚಾರದ ದುರಾಡಳಿತದಿಂದ ಬೇಸತ್ತಿರುವ ಮತದಾರರು ಜನಸಾಮಾನ್ಯರ ಹಾಗೂ ರೈತಪರ ಕಾಳಜಿಯುಳ್ಳ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಪ್ರಧಾನಿ ದೇವೇಗೌಡರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಜಿಲ್ಲಾ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ ಹೇಳಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರು ಸಂಸದರಾಗಿ, ಪ್ರಧಾನಿಗಳಾಗಿ ರಾಜ್ಯದ ಅಭಿವೃದ್ಧಿಗೆ  ಹಾಗೂ ರೈತರ ಪರವಾಗಿ ಕೈಗೊಂಡ ಉತ್ತಮ ನಿರ್ಣಯಗಳು ಅನುಕೂಲವಾಗಲಿದೆ ಎಂದರು.  
ಕೋಟ್ಯಂತರ ಅನುದಾನ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿದ್ದ ಕಡೂರು ವಿಧಾನಸಭಾ ಕ್ಷೇತ್ರ ಹಾಸನ ಕ್ಷೇತ್ರಕ್ಕೆ ವಿಲೀನವಾಗಿ ಈ ಭಾಗದ ಸಂಸದರಾದ ದೇವೇಗೌಡರು ಕ್ಷೇತ್ರಕ್ಕೆ ಕೋಟ್ಯಂತರ ರೂ. ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಎಂದರು.
ಅತಿ ಹೆಚ್ಚು ಮತ ಪಡೆದು ಶಾಸಕ ನಮ್ಮ ನಾಯಕ ವೈ.ಎಸ್.ವಿ. ದತ್ತರವರು ಕಡೂರು ತಾಲೂಕನ್ನು ಬರಗಾಲದ ಪಟ್ಟಿಗೆ ಸೇರ್ಪಡೆಗೊಳಿಸಿ ಹೆಚ್ಚಿನ ಅನುದಾನ ತಂದು ನೀರಿನ ಸಮಸ್ಯೆ ನಿವಾರಣೆಗೆ ಶ್ರಮವಹಿಸಿರುವುದು ಜೆಡಿಎಸ್ ಪಕ್ಷಕ್ಕೆ ಕಡೂರು ವಿಧಾನಸಭಾ ಕ್ಷೇತ್ರದ ಮತದಾರರು ಹೆಚ್ಚಿನ ಮತ ನೀಡಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement