ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮೋದಿ ಅಲೆಯಲ್ಲಿ ಬಿಜೆಪಿ ಗೆಲವು ಖಚಿತ

Rashmi Kasaragodu
Updated On : 7 Apr 2014, 11:12 am

ಕ.ಪ್ರ.ವಾರ್ತೆ    ತರೀಕೆರೆ    ಏ. 6
ಮೋದಿ ಅಲೆ ಇರುವುದರಿಂದ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆಯುತ್ತಾರೆ ಎಂದು ಮಾಜಿ ಶಾಸಕ ಡಿ.ಎಸ್. ಸುರೇಶ್ ತಿಳಿಸಿದರು.
ಪಟ್ಟಣದ ಕೋಡಿಕ್ಯಾಂಪ್‌ನಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಮತ್ತು ಮಹಾಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಭಾರತ ಮತ್ತು ಬಿಜೆಪಿಯನ್ನು ಗೆಲ್ಲಿಸುತ್ತೇವೆ ಎಂದು ಪ್ರತಿಜ್ಞೆ  ಸ್ವೀಕರಿಸಿ ಮಾತನಾಡಿದರು.
ಮೋದಿ ಅಲೆ: ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ವರ್ಗದ ಜನ ಬೆಂಬಲಿಸುತ್ತಿದ್ದು, ತಾಲೂಕಿನಲ್ಲಿ ಅತಿ ಹೆಚ್ಚು ಮತಗಳನ್ನು ಮತದಾರರು ನೀಡುತ್ತಾರೆ ಎಂಬ ಭರವಸೆ ನಮಗಿದೆ. ಮೋದಿ ಅಲೆ ಇರುವ ಕಾರಣ ಹೆಚ್ಚು ಮತಗಳನ್ನು ಬಿಜೆಪಿ ಅಭ್ಯರ್ಥಿ ಶೋಬಾ ಕರಂದ್ಲಾಜೆ ಅವರು ಪಡೆಯುತ್ತಾರೆ ಎಂಬ ನಂಬಿಕೆ ನಮಗೆ ಇದೆ ಎಂದು ಅವರು ತಿಳಿಸಿದರು
ಭಾರತ ದೇಶ ಅಭಿವೃಧ್ಧಿಯಾಗಬೇಕು ಎಂಬ ಹಿನ್ನೆಲೆಯಲ್ಲಿ ಇಂದಿನ ಯುವ ಜನಾಂಗ ಮತ್ತು ಎಲ್ಲಾ ಮತದಾರರು ಬೆಂಬಲಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೆ ಅತಿ ಹೆಚ್ಚು ಬಹುಮತ ನೀಡಲು
ಪಕ್ಷದ ಮುಖಂಡರು, ಕಾರ್ಯಕರ್ತರು ದುಡಿಯುತ್ತಿದ್ದಾರೆ. ಕ್ಷೇತ್ರದಲ್ಲಿ ಮತಯಾಚನೆ ನಡೆಸುವಾಗ ಜನ  ಹೆಚ್ಚಿನ ಪ್ರೀತಿ ಮತ್ತು ವಿಶ್ವಾಸದಿಂದ ಕಾಣುತ್ತಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕ ಟಿ.ಎಚ್. ಶಿವಶಂಕರಪ್ಪ ಮಾತನಾಡಿ ಅಭಿವೃದ್ಧಿಯತ್ತ ದೇಶವನ್ನು ಕರೆದುಕೊಂಡು ಹೋಗುವ ಸಲುವಾಗಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ನಂಬಿಕೆ ನಮಗಿದೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಮತಯಾಚನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮುಖಂಡ ಆರ್. ದೇವಾನಂದ್  ಪ್ರತಿಜ್ಞಾ ವಿಧಿ ಬೋಧಿಸಿದರು. ಯುವ ಮೋರ್ಚಾ ಅಧ್ಯಕ್ಷ ಅಜಯ್‌ಕುಮಾರ್, ಜಿಪಂ ಸದಸ್ಯ ಕೆ.ಆರ್. ಆನಂದಪ್ಪ, ಪುರಸಭೆ ಸದಸ್ಯ ಆನಂದ್, ಖಾಸಿಂ, ಟಿ.ಜಿ. ಮಂಜುನಾಥ್, ಅರುಣ್ ಕುಮಾರ್, ಟಿ.ಎಸ್. ಯಶೋಧರ ಮೂರ್ತಿ, ದರ್ಶನ್ ಮೊದಲಾದವರು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement