ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಏಷ್ಯನ್ ಕ್ರೀಡಾಕೂಟಕ್ಕೆ ಶವಾದ್ ಆಯ್ಕೆ

Rashmi Kasaragodu
Updated On : 8 Apr 2014, 11:40 am

ಚಿಕ್ಕಮಗಳೂರು: ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿ ಜೆ.ಎಂ. ಶವಾದ್ ಏ.10ರಿಂದ 17ರ ವರೆಗೆ ಚೀನಾದ ಬೀಜಿಂಗ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟದ ಅರ್ಹತಾ ಸುತ್ತಿಗೆ ಆಯ್ಕೆಯಾಗಿದ್ದಾನೆ. ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ನಡೆದ ವಿಶ್ವಮಟ್ಟದ ಅಂಧರ ಅಥ್ಲೆಟಿಕ್ಸ್‌ಗಳಲ್ಲಿ ಈಗಾಗಲೇ ನಾಲ್ಕು ಬಾರಿ ಚಿನ್ನದ ಪದಕ ಗಳಿಸಿರುವ ಶವಾದ್ ವಿಶ್ವದ 12ನೇ ಅತ್ಯುತ್ತಮ ಓಟಗಾರ ಎಂಬ ಬಿರುದಿಗೆ ಪಾತ್ರನಾಗಿದ್ದಾನೆ. ಏ.9ರಂದು ನಗರದಿಂದ ಚೀನಾದ ಬೀಜಿಂಗ್‌ಗೆ ತೆರಳಲಿರುವ ಶವಾದ್ ಏಷ್ಯನ್ ಕ್ರೀಡಾಕೂಟದ ಅರ್ಹತಾ ಸುತ್ತಿನಲ್ಲಿ 200- 400 ಮತ್ತು 800 ಮೀಟರ್ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾನೆ ಎಂದು ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement