ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ದಲಿತರಿಗೆ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ'

Rashmi Kasaragodu
Updated On : 9 Apr 2014, 10:41 am

ಚಿಕ್ಕಮಗಳೂರು: ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರಗಳ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಈ ಬಾರಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಗೆಲವು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯದರ್ಶಿ ಛಲವಾದಿ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದುವರೆಗೆ ರಾಜ್ಯದ 13 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದು, ಜನರ ಮಿಡಿತ ಕಾಂಗ್ರೆಸ್ ಪರವಾಗಿದೆ, ರಾಜ್ಯದಲ್ಲಿ 20 ಸ್ಥಾನ ಪಡೆಯುವ ವಿಶ್ವಾಸ ಇದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಎಂದೂ ದಲಿತರಿಗೆ ಅನ್ಯಾಯ ಮಾಡಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿರುವ ಎರಡೂ ಸರ್ಕಾರಗಳು ದಲಿತರಿಗೆ ಅತ್ಯುನ್ನತ ಹುದ್ದೆ ನೀಡಿವೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ಸರ್ಕಾರಗಳ ಸಾಧನೆ ಮತ್ತು ಅಭಿವೃದ್ಧಿ ಕೆಲಸಗಳನ್ನು ತಿರುಚುತ್ತಿವೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement