ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಜನಪರ ಕಾಳಜಿ ಮರೆತ ಕಾಂಗ್ರೆಸ್, ಬಿಜೆಪಿ'

Mainashree
Updated On : 11 Apr 2014, 11:37 am

ಚಿಕ್ಕಮಗಳೂರು:  ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್. ದೇವರಾಜ್ ಹೇಳಿದ್ದಾರೆ.
ಈ ಕ್ಷೇತ್ರದಲ್ಲಿ ಉಭಯ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿಲ್ಲ. ಬದಲಿಗೆ ವ್ಯಕ್ತಿಯಾಧಾರಿತವಾಗಿ ಬಿಜೆಪಿ, ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಬಿಜೆಪಿ, ಮೋದಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದೆ. ಕಾಂಗ್ರೆಸ್ ರಾಹುಲ್ ಗಾಂಧಿ ಹೆಸರಿನಲ್ಲಿ ವೋಟ್ ಕೇಳುತ್ತಿದೆ. ಈ ಎರಡು ಪಕ್ಷಗಳಿಗೆ ಜನಪರ ಕಾಳಜಿ ಇಲ್ಲ ಎಂದು ಆರೋಪಿಸಿದರು.
ವಿಧಾನಪರಿಷತ್ ಸದಸ್ಯೆ ಮೋಟಮ್ಮ ಅವರ ಮೂಡಿಗೆರೆಯ ಮನೆಯ ಮೇಲೆ ಚುನಾವಣಾಧಿಕಾರಿಗಳ ತಂಡ ಇತ್ತೀಚೆಗೆ ದಾಳಿ ನಡೆಸಿತ್ತು. ಅನಾಮಧೇಯ ಕರೆಯನ್ನು ಮಾಡಿ ಸುಳ್ಳು ಮಾಹಿತಿಯನ್ನು ನೀಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement