ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜಾತಿ ವಿಭಿನ್ನತೆ ಮಾರಕ

Mainashree
Updated On : 12 Apr 2014, 10:53 am

ಕ.ಪ್ರ.ವಾರ್ತೆ ಟಿ ನರಸಿಂಹರಾಜಪುರ ಟಿ ಏ.11
ಜಾತಿ, ಧರ್ಮ, ಲಿಂಗಬೇಧ ಹಾಗೂ ಪ್ರಾದೇಶಿಕ ಭಿನ್ನತೆಗಳು ದೇಶದ ಅಭಿವೃದ್ಧಿಗೆ ಮಾರಕವಾಗುತ್ತಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕ ಡಾ.ರವೀಂದ್ರ ಆರ್. ಗಡ್ಕರ್ ಅಭಿಪ್ರಾಯಪಟ್ಟರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, “@»ÈÚ䦪 ಹೊಂದುತ್ತಿರುವ ರಾಷ್ಟದಲ್ಲಿ ಯುವ ಜನರ ®Û}ÚÃ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.
ಎಚ್ಚರ ವಹಿಸಲಿ:  ಪರಸ್ಪರ ಸಮನ್ವಯದ ಕೊರತೆಯಿಂದಾಗಿ ಜನರಲ್ಲಿ ಅಂತರ ಸೃಷ್ಟಿಯಾಗಿದೆ. ಇದರಿಂದಾಗಿ ಪ್ರಗತಿಗೆ ಒಗ್ಗಟ್ಟಿನಿಂದ ದುಡಿಯಬೇಕಾದ ಯುವ ಜನತೆ ತಮ್ಮಲ್ಲೇ ಗುಂಪುಗಳಾಗಿ ಪರಿವರ್ತನೆ ಹೊಂದಿದ್ದಾರೆ. ಇಂತಹ ಸಾಮಾಜಿಕ ಅಸಮಾನತೆಗಳು ಪದೇ ಪದೇ ಮರುಕಳಿಸದಂತೆ ಪ್ರಜ್ಞಾವಂತ ಸಮಾಜ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಜಾಗೃತಿಗಾಗಿ ಕಾರ್ಯಾಗಾರ:  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ಕೆ.ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಪ್ರಗತಿ ಯುವಕರಿಂದ ಮಾತ್ರ ಸಾಧ್ಯ. ಇತ್ತೀಚಿನ ದಿನಗಳಲ್ಲಿ ಯುವಕರು ರಾಷ್ಚೀಯ ಬದ್ಧತೆಯಿಂದ ವಿಮುಖರಾಗುತ್ತಿದ್ದಾರೆ. ಅವರಲ್ಲಿರುವ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.
ಕೊಪ್ಪ ಸೆಂಟ್ ನೋಬರ್ಟ್ ಶಾಲೆಯ ಆಡಳಿತಾಧಿಕಾರಿ ಫಾದರ್ ಎನ್.ಸಿ. ಶಿಜೋ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿ ನರ್ಸಸ್ ಲೈನ್ ಸಂಸ್ಥೆಯ ಮುಖ್ಯಸ್ಥ ಸಿಜ್ಜು ಮುಳ್ಳಪಳ್ಳಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಕೆ.ಪೂರ್ಣೇಶ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಅಬ್ದುಲ್ ವಾಹಾಬ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement