ದೇವೇಗೌಡರ ಪ್ರಚಾರ ಇಂದು
ಚಿಕ್ಕಮಗಳೂರು: ನಗರದ ವಿಜಯಪುರ ಮೈದಾನದಲ್ಲಿ ಶನಿವಾರ ಸಂಜೆ 4.30ಕ್ಕೆ ಜೆಡಿಎಸ್ ಚುನಾವಣಾ ಪ್ರಚಾರ ನಡೆಯಲಿದೆ. ಈ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ. ಧನಂಜಯಕುಮಾರ್ ಭಾಗವಹಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಡೂರು: ಕಡೂರು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕಾಗಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶನಿವಾರ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಕ್ಷೇತ್ರದ ವ್ಯಾಪ್ತಿಯ ಅಣ್ಣೇಗೆರೆ ಗ್ರಾಮ ಪಂಚಾಯಿತಿಯ 9ನೇ ಮೈಲಿಕಲ್ಲು ವೃತ್ತದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.