ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತದಾನ ಬಹಿಷ್ಕಾರ: ಮನವೊಲಿಕೆ ವಿಫಲ

Mainashree
Updated On : 12 Apr 2014, 10:54 am

ಕ.ಪ್ರ.ವಾರ್ತೆ ್ಣ ಚಿಕ್ಕಮಗಳೂರು ್ಣ ಏ. 11
ಮೂಲ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ ಮತದಾನ ಬಹಿಷ್ಕಾರಕ್ಕೆ ಮೂಡಿಗೆರೆ ತಾಲೂಕಿನ ಅಡ್ಡಗುಡ್ಡೆ ಹಾಗೂ ಮಡ್ಡಿಕೆರೆ ಗ್ರಾಮಸ್ಥರು ನಿರ್ಧರಿಸಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ನಡೆಸಿದ ಯತ್ನ ವಿಫಲವಾಯಿತು.
 ಮೂಡಿಗೆರೆ ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ  ಜಿ.ಬಿ. ರಾಜಪ್ಪ, ತಾ.ಪಂ. ಕಾರ್ಯನಿರ್ವಾಹಕಾಧಿಕಾರಿ ಚಂದ್ರಮೌಳಿ, ಜಿಲ್ಲಾ ಸ್ವೀಪ್ ಸಮಿತಿಯ ಕೆ.ಬಿ. ನೀಲಕಂಠಪ್ಪ ಹಾಗೂ ತಂಡದವರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಮತದಾನ ಮಾಡುವಂತೆ ಮನವೊಲಿಕೆಗೆ ಪ್ರಯತ್ನಿಸಿದರು.
ಸೌಲಭ್ಯಕ್ಕೆ ಅಗ್ರಹ: ಅಡ್ಡಗುಡ್ಡೆ ಮತ್ತು ಮಡ್ಡಿಕೆರೆ ಗ್ರಾಮಸ್ಥರು ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸೌಲಭ್ಯ, ಕಾಲು ಸೇತುವೆ ನಿರ್ಮಾಣ ಸೌಲಭ್ಯಗಳಿಗೆ ಒಳಗೊಂಡಂತೆ ಇತರೆ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದರ ಹಿನ್ನೆಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿದ್ದರು.
 ತಾ.ಪಂ. ಕಾರ್ಯನಿರ್ವಾಹಕಾಧಿಕಾರಿಗಳು ಗ್ರಾಮಸ್ಥರಿಗೆ ಆದ್ಯತೆಯ ಮೇಲೆ ಕುಡಿಯುವ ನೀರು ಸೇರಿದಂತೆ ವಿದ್ಯುತ್ ಸಂಪರ್ಕ ಹಾಗೂ ಮತ್ತಿತರ ಮೂಲಭೂತ ಸೌಕರ್ಯವನ್ನು ಕಲ್ಪಿಸುವ ಭರವಸೆಯನ್ನು ನೀಡಿದರು.
ಮತ ಹಾಕಲು ಮನವಿ: ಏ. 17 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನದಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯ ಮತವನ್ನು ಚಲಾಯಿಸಬೇಕೆಂದು ಸ್ವೀಪ್ ಸದಸ್ಯರಾದ ನೀಲಕಂಠಪ್ಪ ರವರು ಮನವಿ ಮಾಡಿದರು.
 ಗ್ರಾಮಸ್ಥರಾದ ಕೆ.ಕೆ. ರಾಮಯ್ಯ, ರತ್ನಮ್ಮ, ರಶ್ಮಿ ಹಾಗೂ ಮಡ್ಡಿಕೆರೆ ನಾಗೇಗೌಡ ತಮ್ಮ ಗ್ರಾಮದ ಮೂಲ ಸೌಕರ್ಯಗಳನ್ನು ನೀಡಬೇಕೆಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement