ಸಿಎಂ ಸಿದ್ದರಾಮಯ್ಯ ಆಡಳಿತವೇ ಕಾಂಗ್ರೆಸ್‌ಗೆ ಶ್ರೀರಕ್ಷೆ
ಕೊಪ್ಪ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ದೇಶದ ಅಭಿವೃದ್ಧಿ ಬಗ್ಗೆ ರಾಹುಲ್ ಗಾಂಧಿ ಹೊಂದಿರುವ ಆದರ್ಶ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಶ್ರೀರಕ್ಷೆ ಎಂದು ಕಸಬಾ ಹೋಬಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುದುರೆಗುಂಡಿ ದೀಪಕ್ ತಿಳಿಸಿದರು.
ಪಟ್ಟಣದ ಸಮೀಪದ ಚಿಟ್ಟೇಮಕ್ಕಿ ರಸ್ತೆಯಲ್ಲಿ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ಬಂದ ಮರುಕ್ಷಣದಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಒಂದು ರುಪಾಯಿಗೆ ಒಂದು ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಘೋಷಣೆ ಮಾಡಿರುವುದಲ್ಲದೆ, ಜನಸಮಾನ್ಯರು ನಿಗಮ ಮಂಡಳಿಗಳಲ್ಲಿ ತೆಗೆದುಕೊಂಡ ಸಾಲವನ್ನು ಮನ್ನಾ ಮಾಡಿದ್ದಾರೆ.ಆರ್‌ಟಿಐ ಕಾಯ್ದೆಯನ್ನು ಜಾರಿಗೆ ಶೇ. 25ರಷ್ಟು ಮೀಸಲಾತಿ ಕಲ್ಪಿಸಿದ್ದಾರೆ ಎಂದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಒಣಿತೋಟ ರತ್ನಕಾರ್, ನಾರ್ವೆ ಅಶೋಕ್, ಹರಂದೂರು ಗ್ರಾಪಂ ಅಧ್ಯಕ್ಷೆ ಇಂದಿರಾಮ್ಮ, ಸದಸ್ಯೆರಾದ ನಾಗರತ್ನಮ್ಮ, ಎಂ.ಸಿ. ಅಶೋಕ್ ಮೊದಲಾದವರು ಇದ್ದರು.