ಅಲ್ಪಸಂಖ್ಯಾತರ ಮೂಗಿಗೆ ಕಾಂಗ್ರೆಸ್ ತುಪ್ಪ: ಆರೋಪ
ಚಿಕ್ಕಮಗಳೂರು: ಅಲ್ಪಸಂಖ್ಯಾತ ವರ್ಗಕ್ಕೆ ಮೂಗಿಗೆ ತುಪ್ಪ ಸವರಿ ಭರವಸೆಗಳಲ್ಲೆ ಕಾಲಹರಣ ಮಾಡಿದ ಕಾಂಗ್ರೆಸ್ ಪಕ್ಷಕ್ಕಿಂತ ಕ್ರೈಸ್ತ ಸಮುದಾಯಕ್ಕೆ ಹೆಚ್ಚು ಅನುಕೂಲ ಕಲ್ಪಿಸಿದ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು ಅಲ್ಪಸಂಖ್ಯಾತ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ರಾಬರ್ಟ್ ಹೇಳಿದ್ದಾರೆ.
ನಗರದ ಗೌರಿಕಾಲುವೆ, ವಿಜಯಪುರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಮನೆ ಮನೆ ಪ್ರಚಾರ ಕಾರ್ಯದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ನಡೆಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಮಾತ್ರ ಮುಸಲ್ಮಾನರು ಮತ್ತು ಕ್ರೈಸ್ತರ ಹೆಸರಿನಲ್ಲಿ ಅಧಿಕಾರ ಅನುಭವಿಸುತ್ತಾ ಮಂಕುಬೂದಿ ಎರಚುತ್ತಿದೆ ಎಂದು ಆರೋಪಿಸಿದರು.
ಪಕ್ಷದ ಮುಖಂಡ ಜೋಸೆಫ್, ನಗರಸಭೆ ಮಾಜಿ ಸದಸ್ಯ ಮಂಜುನಾಥ್, ಸಗಾಯಿದಾಸ್, ಮುಖಂಡರಾದ ಸ್ಟೆಲ್ಲ, ಜೇಮ್ಸ್, ಫಿಲಿಪ್, ನೆಲ್ಸನ್, ಗೀತಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.