1004 ಹೊಸ ಮತದಾರರು
ನರಸಿಂಹರಾಜಪುರ: ಲೋಕಸಭಾ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತಾಲೂಕಿನಲ್ಲಿ ಖಾಂಡ್ಯ ಹೋಬಳಿ ಸೇರಿ ಒಟ್ಟು 61,735 ಮತದಾರರು ಮತ ಚಲಾಯಿಸಲಿದ್ದಾರೆ ಎಂದು ತಹಸೀಲ್ದಾರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
30,779 ಪುರುಷ ಮತದಾರರು ಹಾಗೂ 30,956 ಮಹಿಳಾ ಮತದಾರರಿದ್ದು, ಈ ವರ್ಷ 1004 ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಒಟ್ಟು 94 ಮತಗಟ್ಟೆಗಳಿದ್ದು, ಇವುಗಳಲ್ಲಿ 20 ಸೂಕ್ಷ್ಮ ಹಾಗೂ 7 ಮತಗಟ್ಟೆಯನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಮತದಾನವು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಮತದಾರರು ಯಾವುದೇ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡದೇ ನಿರ್ಭಯವಾಗಿ ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣಾ ಆಯೋಗವೇ ಮತದಾರರ ಮನೆಗಳಿಗೆ ಮತ ಚೀಟಿಗಳನ್ನು ಕಳಿಸಲಾಗಿದೆ. ಇದನ್ನು ಮತಗಟ್ಟೆ ಅಧಿಕಾರಿಗಳಿಗೆ ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
2 ಮಾದರಿ ಮತ ಗಟ್ಟೆ: ಚುನಾವಣಾ ಆಯೋಗದ ಆದೇಶದಂತೆ ತಾಲೂಕಿನಲ್ಲಿ ಎರಡು ಮತ ಗಟ್ಟೆಗಳನ್ನು ಮಾದರಿ ಮತಗಟ್ಟೆ ಎಂದು ಗುರುತಿಸಲಾಗಿದೆ. ನರಸಿಂಹರಾಜಪುರ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಬಾಲಕರ ಶಾಲೆಯ ಮತಗಟ್ಟೆ ಸಂಖ್ಯೆ 22 ಹಾಗೂ ಬಾಳೆಹೊನ್ನೂರು ಗ್ರಾಪಂ ಕಚೇರಿಯ ಮತಗಟ್ಟೆ ಸಂಖ್ಯೆ 199 ಮಾದರಿ ಮತ ಗಟ್ಟೆಗಳಾಗಿವೆ. ತಾಲೂಕಿನ 94 ಮತಗಟ್ಟೆಗೂ 4 ಚುನಾವಣಾ ಸಿಬ್ಬಂದಿ ಮತ್ತು ಒಬ್ಬರು ಡಿ. ದರ್ಜೆ ನೌಕರರಿರುತ್ತಾರೆ.
ಬುಧವಾರ ಬೆಳಗ್ಗೆಯಿದಲೇ ತಾಲೂಕಿನಿಂದ ಬೇರೆ ತಾಲೂಕಿಗೆ ಹೋಗುವ ಚುನಾವಣಾ ಸಿಬ್ಬಂದಿಯನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದ್ದು, ಬುಧವಾರ ಮಧ್ಯಾಹ್ನ ಆಯಾ ಮತಗಟ್ಟೆಗೆ ಹೋಗಲಿದ್ದಾರೆ. ಮತಗಟ್ಟೆ ಸಿಬ್ಬಂದಿಗಳನ್ನು ಬೇರೆ ತಾಲೂಕಿಗೆ ಕಳುಹಿಸಲು ಹಾಗೂ ಬೇರೆ ತಾಲೂಕಿನಿಂದ ಇಲ್ಲಿಗೆ ಬರಲು ಒಟ್ಟು 20 ಬಸ್ಸು ಹಾಗೂ 17 ಜೀಪಿನ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಚುನಾವಣಾ ಆಯೋಗದ ಆದೇಶದಂತೆ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕಾಗಿದೆ.ಮತಾದರರು ತಪ್ಪದೆ ಮತ ಚಲಾಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.