ಯುವಪಡೆಯಿಂದ ಬಿಜೆಪಿಗೆ ಮತ್ತಷ್ಟು ಬಲ: ಶಾಸಕ ಎಂಪಿಕೆ
ಮೂಡಿಗೆರೆ: ಮೋದಿ ಅಲೆ ಎಲ್ಲೆಡೆ ವ್ಯಾಪಿಸಿದ್ದು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಗೊಳ್ಳುವ ಯುವಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕಳಸ ಹೋಬಳಿ ಕಾಂಗ್ರೆಸ್‌ನ ಕೆಲ ಮುಖಂಡರು ಬಿಜೆಪಿ ಸೇರ್ಪಡೆಗೊಂಡ ಬಳಿಕ ಅವರು ಮಾತನಾಡಿ, 2008ರ ಚುನಾವಣೆಗೂ ಈಗ ನಡೆಯುತ್ತಿರುವ ಚುನಾವಣೆಗೂ ಅಜಗಜಾಂತರ ವ್ಯತ್ಯಾಸವಾಗಿದೆ. ಮೂಡಿಗೆರೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿಗೆ 15 ಸಾವಿರ ಹೆಚ್ಚುವರಿ ಮತಗಳು ಚಲಾವಣೆ ಆಗಲಿವೆ. ಒಟ್ಟಾರೆ ಈ ಚುನಾವಣೆಯಲ್ಲಿ ಬಿಜೆಪಿ 1 ಲಕ್ಷಕ್ಕೂ ಹೆಚ್ಚು ಅಂತರದಿಂದ ಭರ್ಜರಿ ಗೆಲುವು ದಾಖಲಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಪಂ ಅಧ್ಯಕ್ಷ ಎಂ.ಎ.ಶೇಷಗಿರಿ, ಕಾರ್ತಿಕೇಯ ಶಾಸ್ತ್ರಿ ಮಾತನಾಡಿದರು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪ್ರಾಣೇಶ್, ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಸುದರ್ಶನ್, ಎಂ.ಆರ್. ಜಗದೀಶ್, ಪುರುಷೋತ್ತಮರಾಜ್ ಅರಸ್, ಪ್ರಮೋದ್‌ಕುಮಾರ್, ಜಯಂತ್, ಕಳಸ ಹೋಬಳಿ ಅಧ್ಯಕ್ಷ ಕೆ.ಸಿ.ನಾಗೇಶ್, ಆದಿತ್ಯ, ರಂಗನಾಥ್ ಇದ್ದರು.
--