ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಂಘ ಪರಿವಾರ ಸಾಮರಸ್ಯ ಹಾಳು ಮಾಡುವ ಪ್ರಯತ್ನ: ಸಿದ್ದರಾಮಯ್ಯ

Lingaraj Badiger
Updated On : 16 Apr 2014, 11:42 am

ಚಿಕ್ಕಮಗಳೂರು: ಪುಂಡಾಟಿಕೆ, ಮಾರಲ್ ಪೊಲೀಸ್ ಗಿರಿಗೆ ಅವಕಾಶ ನೀಡಿದ್ದೇಯಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘಪರಿವಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಾನೂನು ಕೈಗೆತ್ತಿಕೊಂಡರೆ, ಅದಕ್ಕೆ ಅವಕಾಶ ನೀಡಿದ್ದೆಯಾದರೇ ಅವರು ಯಾರೇ ಇರಲಿ ಕಠಿಣ ಕ್ರಮವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡುವ ಆರಂಭದಲ್ಲೇ ಈ ವಿಷಯವನ್ನು ಪ್ರಸ್ತಾಪಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿತ್ತು. ಇದೀಗ ಕಳೆದ 11 ತಿಂಗಳಲ್ಲಿ ಸುಧಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಪುಂಡಾಟಿಕೆ, ಮಾರಲ್ ಪೊಲೀಸ್ ಗಿರಿಗೆ ಯಾರಾದರೂ ಪ್ರಯತ್ನ ಪಟ್ಟಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ನೆಮ್ಮದಿ ಕದಡುವ ಪ್ರಯತ್ನ: ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಿಂದುತ್ವ ಪ್ರಯೋಗ ಮಾಡುವ ಪ್ರಯೋಗ ಶಾಲೆಗಳಿವೆ. ಸಂಘಪರಿವಾರ ಈ ಪ್ರದೇಶದಲ್ಲಿ ಸಾಮರಸ್ಯ ಹಾಳು ಮಾಡುವ ಪ್ರಯತ್ನ ನಡೆಸುತ್ತಿದೆ. ಅಂತಹ ಪುಂಡಾಟಿಕೆ, ಶಾಂತಿ, ನೆಮ್ಮದಿ ಕದಡುವ ಪ್ರಯತ್ನ ಮಾಡಿದರೆ ಕಠಿಣ ಕ್ರಮದ ಮೂಲಕ ಹತ್ತಿಕ್ಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement