ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಬಿಜೆಪಿ ಅಭ್ಯರ್ಥಿ ಗೆಲವು ಖಚಿತ'

Rashmi Kasaragodu
Updated On : 17 Apr 2014, 10:36 am

ಕ.ಪ್ರ.ವಾರ್ತೆ ಟಿ ಕಡೂರು ಟಿ ಏ.16
ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕೆಂಬ ಹಿನ್ನೆಲೆಯಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರೇಕಲ್ ಪ್ರಕಾಶ್ ಹೇಳಿದ್ದಾರೆ.
ಸಿ.ಎಚ್. ವಿಜಯಶಂಕರ್ ಅವರನ್ನು ಬಿಜೆಪಿ ಹಾಸನ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ. ಹಾಸನ ಈ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ದುರಾಡಳಿತ ಜನರು ನೋಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ಮತದಾರರು ತಿರಸ್ಕರಿಸಲಿದ್ದಾರೆ. ಈ ಬಾರಿ ಹಾಸನ ಕ್ಷೇತ್ರದಲ್ಲಿ ಬೇರು ಬಿಟ್ಟಿರುವ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡುವ ನಿಟ್ಟಲ್ಲಿ ಬದಲಾವಣೆ ಬಯಸಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಕಡೂರು ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿಯತ್ತ ಮತದಾರರು ಒಲವು ತೋರಿಸುತ್ತಿರುವ ಹಿನ್ನೆಲೆ ಅಭ್ಯರ್ಥಿ ವಿಜಯಶಂಕರ್ ಗೆಲುವು ಸಾಧಿಸಲಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement