ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತದಾರರಿಗೆ ಕಾಂಗ್ರೆಸ್ ಕೃತಜ್ಞತೆ

Lingaraj Badiger
Updated On : 19 Apr 2014, 10:36 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ. 18
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಹೇಳಿದ್ದಾರೆ.
ಇಲ್ಲಿನ ಪಕ್ಷದ ಚುನಾವಣಾ ಪ್ರಚಾರ ಕಚೇರಿಯಲ್ಲಿ ಶುಕ್ರವಾರ ನಡೆದ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಭೆಯಲ್ಲಿ ಮಾತನಾಡಿ, ಶಾಂತಿಯುತವಾಗಿ ಮತದಾನ ನಡೆಸಲು ಕಾರಣರಾದ ಜಿಲ್ಲೆಯ ಎಲ್ಲಾ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.
ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಪರವಾಗಿ ಅವಿರತವಾಗಿ ಶ್ರಮಿಸಿ ತಾವೇ ಅಭ್ಯರ್ಥಿ ಎಂಬಂತೆ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದು ಸಂತಸ ತಂದಿದ್ದು, ತಮ್ಮೆಲ್ಲರ ಶ್ರಮ, ಮತದಾರರ ಆಶೀರ್ವಾದದಿಂದ ಜಯಪ್ರಕಾಶ್ ಹೆಗ್ಡೆ ಅವರ ಗೆಲವು ನಿಶ್ಚಿತ ಎಂದ ಅವರು, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿ ಹೆಚ್ಚು ಮತದಾನ ಮಾಡಿದ್ದಾರೆ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕೆಲಸಗಳು ಹೆಚ್ಚಿನ ಮತ ತಂದು ಕೊಡಲಿದ್ದು, ಕಾರ್ಯಕರ್ತರ ಶ್ರಮ ಅನನ್ಯವೆಂದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವನಮಾಲ ಮೃತ್ಯುಂಜಯ, ಮುಖಂಡರಾದ ಆನಂದ್, ಮಹಮದ್ ಅಕ್ಬರ್, ಎಲ್.ವಿ. ಬಸವರಾಜ್, ಮಹಮದ್ ಹನೀಫ್, ವೆಂಕಟೇಶ್ ನಾಯ್ಡು, ಜೆ.ಬಿ. ಮಹೇಶ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement