'ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ಖಚಿತ'
ಕ.ಪ್ರ.ವಾರ್ತೆ ್ಣ ಕೊಪ್ಪ ್ಣ ಏ. 19
ತಾಲೂಕಿನಲ್ಲಿ ಉತ್ಸಾಹದಿಂದ ಮತದಾರರು ಹಕ್ಕು ಚಲಾಯಿಸಿದ್ದಾರೆ. ಮತದಾನ ಕಾರ್ಯದಲ್ಲಿ ಭಾಗವಹಿಸಿದ ಮತದಾರರು, ಕಾರ್ಯಕರ್ತರು, ಅಧಿಕಾರಿಗಳು ಹಾಗೂ ಆಡಳಿತಕ್ಕೆ ಅಭಿನಂದನೆ ಎಂದು ಬ್ಲಾಕ್ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶೋಭಿಂತ್ ಹೇಳಿದರು.
ಇಲ್ಲಿನ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಜಯಪ್ರಕಾಶ್ ಹೆಗ್ಡೆ ಅವರ ವ್ಯಕ್ತಿತ್ವದ ಪ್ರಭಾವ, ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಒಲಿದಿದ್ದಾರೆ. ಬಹುಮತದೊಂದಿಗೆ ಕಾಂಗ್ರೆಸ್ ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಪೂರ್ವದಲ್ಲಿ ಪಕ್ಷ ಪ್ರಸ್ತಾಪಿಸಿರುವ ಎಲ್ಲಾ ವಿಚಾರಗಳಲ್ಲಿ ಬದ್ಧತೆಯಿಂದ ಪಕ್ಷ ಕಾರ್ಯನಿರ್ವಹಿಸಲಿದೆ. ತೋಟ ಕಾರ್ಮಿಕರು, ಅಲ್ಪಸಂಖ್ಯಾತರು ಹೆಚ್ಚಿನ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮತದಾನಕ್ಕೆ ತಾಲೂಕು ಆಡಳಿತ ಉತ್ತಮ ವ್ಯವಸ್ಥೆ ಕಲ್ಪಿಸಿದ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಕೊಂಡಿದ್ದು, ಅವರನ್ನೆಲ್ಲ ಪಕ್ಷ ಅಭಿನಂದಿಸುತ್ತದೆ ಎಂದರು.
ಕಾಂಗ್ರೆಸ್ ತಾಲೂಕು ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಖಾದರ್ ಮಾತನಾಡಿ, ಈ ಭಾರಿ ಈ ಭಾಗ ಬಹುತೇಕ ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ಮತ ನೀಡಿರುವುದರಿಂದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯ ಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಮೀಗಾ ಚಂದ್ರಶೇಖರ್, ಶಶಿಕುಮಾರ್, ಅಬ್ದುಲ್ ಖಾದರ್, ಓಣಿತೋಟ ರತ್ನಾಕರ್, ನಾರ್ವೆ ಅಶೋಕ್, ಹೊಳಗಾರ್ ಶ್ರೀಧರ್, ಅಲ್ತಾಫ್, ಬರ್ಕತ್ ಅಲಿ, ಇರ್ವಿನ್ ಸೋನ್ಸ್, ಎಂ.ಸಿ. ಅಶೋಕ್ ಮೊದಲಾದವರಿದ್ದರು.