ಕೃಷಿ ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ
ಕ.ಪ್ರ.ವಾರ್ತೆ ್ಣ ಮೂಡಿಗೆರೆ ್ಣ ಏ. 19
ಇಂದಿನ ದಿನಗಳಲ್ಲಿ ಯುವಕರು ಐಟಿ, ಬಿಟಿ ಕಡೆಗೆ ಮುಖ ಮಾಡಿದ್ದಾರೆ. ಕೃಷಿ ಕ್ಷೇತ್ರವನ್ನು ಮರೆಯುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವಿಧಾನಪರಿಷತ್ ಸದಸ್ಯೆ ಡಾ. ಮೋಟಮ್ಮ ಹೇಳಿದರು.
ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ 10 ದಿನಗಳ ಕಾಲ ನಡೆಯುತ್ತಿರುವ ಗೃಹೋಪಯೋಗಿ ವಸ್ತುಗಳ ಪ್ರದರ್ಶನ “VÚäÔÚËæàÞºæ’ ಮಹಿಳೆಯರನ್ನು ಹೆಚ್ಚು ಆಕರ್ಷಿಸುತ್ತಿದೆ. ಗೃಹೋಪಯೋಗಿ ವಸ್ತುಗಳು ಒಂದೇ ಮಳಿಗೆಯಲ್ಲಿ ಸಿಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅಚ್ಚರಿ ವ್ಯಕ್ತಪಡಿಸಿದರು.
ಯುವಕರು ಕೃಷಿಯತ್ತ ತೊಡಗಿಕೊಳ್ಳುವುದರೊಂದಿಗೆ ಹೆಚ್ಚಿನ ಆಸಕ್ತಿ ತೋರಬೇಕು. ಹಾಗಾದಲ್ಲಿ ಮಾತ್ರ ಕೃಷಿ ಉಳಿಸಲು ಸಾಧ್ಯ ಎಂದರು.
ಕಾರ್ಯಕ್ರಮ ಆಯೋಜಕ ಕೆಸವಳಲು ಡಾಟ್ ಕಾಂ ವ್ಯವಸ್ಥಾಪಕ ರಾಘವೇಂದ್ರ ಅವರೊಂದಿಗೆ ಮಾತನಾಡಿದ ಅವರು, ಮಲೆನಾಡಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆ ಅಗತ್ಯವಿದೆ. ಗೃಹಶೋಭೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಮಲೆನಾಡಿನ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಮಲೆನಾಡು ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅದಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆಯನ್ನೂ ನೀಡಿದರು.
ಈ ಸಂದರ್ಭದಲ್ಲಿ ಬಿಂಬಾ ರಾಯ್ಕರ್ ಉಪಸ್ಥಿರಿದ್ದರು.