ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪ್ರಕರಣದ ತನಿಖೆಗೆ ಎಸ್ಪಿ ಸೂಚನೆ

Mainashree
Updated On : 20 Apr 2014, 11:45 am

ಚಿಕ್ಕಮಗಳೂರು: ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದವರ ಮೇಲೆ ಪೊಲೀಸರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್. ಚೇತನ್ ಹೇಳಿದ್ದಾರೆ.
ಶೃಂಗೇರಿ ತಾಲೂಕಿನ ತನಿಕೋಡು ಚೆಕ್ ಪೋಸ್ಟ್ ಬಳಿ ಶನಿವಾರ ಮುಂಜಾನೆ  ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ತನಿಕೋಡು ಸುತ್ತಮುತ್ತ ನಕ್ಸಲೀಯರು ಕಾಣಿಸಿಕೊಂಡಿರುವ ಮಾಹಿತಿಯ ಮೇರೆಗೆ ಎ.ಎನ್.ಎಫ್. ಹಾಗೂ ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಎಂದಿನಂತೆ ಇಲ್ಲಿನ ಚೆಕ್ ಪೋಸ್ಟ್ ಬಳಿ ಶನಿವಾರ ಮುಂಜಾನೆ ಸುಮಾರು 3 ರಿಂದ 4 ಗಂಟೆಯ ವೇಳೆಯಲ್ಲಿ ಈ ಘಟನೆ ನಡೆದಿದೆ.
 ಪೊಲೀಸರು ವಾಹನವನ್ನು ತಪಾಸಣೆ ಮಾಡಲು ಹತ್ತಿರಕ್ಕೆ ಹೋಗುತ್ತಿದ್ದಂತೆ ವಾಹನದಲ್ಲಿದ್ದವರು ಓಡಿ ಹೋಗುತ್ತಿದ್ದ ವೇಳೆ ನಕ್ಸಲೀಯರು ಇರಬಹುದೆಂಬ ಶಂಕೆಯ ಮೇಲೆ ಕರ್ತವ್ಯದಲ್ಲಿದ್ದ ಪೊಲೀಸರು ಗುಂಡು ಹಾರಿಸಿದ್ದು ಇದರಿಂದಾಗಿ ಕಬೀರ್ ಎಂಬುವವರು ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement