ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮೋದಿ ಪ್ರಧಾನಿಯಾಗುವುದು ಖಚಿತ: ವಿಶ್ವಾಸ

Mainashree
Updated On : 21 Apr 2014, 11:06 am

ಬಾಳೆಹೊನ್ನೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾರಿ ಬಹುಮತದೊಂದಿಗೆ ಆಯ್ಕೆಯಾಗುವುದರೊಂದಿಗೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಖಚಿತ ಎಂದು ಬಾಳೆಹೊನ್ನೂರು ಹೋಬಳಿ ನಮೋ ಬ್ರಿಗೇಡ್ ಅಧ್ಯಕ್ಷ ಬಿ.ವಿ. ದೀಪಕ್ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ನಮೋ ಬ್ರಿಗೇಡ್ ಕಾರ್ಯಕರ್ತರು ಉತ್ತಮವಾಗಿ ಕಾರ್ಯನಿರ್ವಹಿಸಿರುವುದು ಶ್ಲಾಘನೀಯವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಎಲ್ಲಾ ಭಾಗಗಳಲ್ಲೂ ಯುವಕರು ಉತ್ತಮ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.
ನರೇಂದ್ರ ಮೋದಿ ದೇಶದ ಭವಿಷ್ಯದ ಪ್ರಧಾನಿ ಎಂದು ಬಿಂಬಿತವಾಗಿದ್ದು, ವಿದೇಶಗಳಲ್ಲೂ ಈ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ.
ದೇಶಾದ್ಯಂತ ಮೋದಿ ಅಲೆಯಿಂದ ವಿರೋಧ ಪಕ್ಷಗಳು ಕಂಗಾಲಾಗಿದ್ದು, ಭವಿಷ್ಯದ ದಿನಗಳಲ್ಲಿ ಗುಜರಾತ್ ರಾಜ್ಯದಂತೆ ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ ಮೂಲೆ ಮೂಲೆಗಳಲ್ಲಿ ಅಭಿವೃದ್ಧಿ ಹೊಂದಿ ವಿಶ್ವವೇ ನಿಬ್ಬೆರಗಾಗುವಂತಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement