ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಎಎನ್‌ಎಫ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ

Rashmi Kasaragodu
Updated On : 22 Apr 2014, 10:50 am

ಕ.ಪ್ರ.ವಾರ್ತೆ   ಚಿಕ್ಕಮಗಳೂರು   ಏ. 21
ಶೃಂಗೇರಿಯ ತನಿಕೋಡು ಬಳಿ ಯುವಕನನ್ನು ಗುಂಡಿಕ್ಕಿ ಕೊಂದಿರುವ ಎಎನ್‌ಎಫ್ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಂಘಟನೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸೈಯದ್ ಅಜ್ಮತ್ ನೇತೃತ್ವದಲ್ಲಿ ಇಲ್ಲಿನ ಎನ್‌ಎಂಸಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪೊಲೀಸರು ನಡೆಸಿರುವ ಕೃತ್ಯವನ್ನು ಖಂಡಿಸಿದರು.
ಪೊಲೀಸರು ನಡೆಸಿರುವ ಇದೊಂದು ಅಮಾನವೀಯ ಕೃತ್ಯ ಹಾಗೂ ಮೃತ ದೇಹವನ್ನು ತರಲು ಶೃಂಗೇರಿಗೆ ತೆರಳಿದ ಸಂದರ್ಭದಲ್ಲಿ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಸಂಘಟನೆ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ತಮ್ಮ ಭಾಷಣದಲ್ಲಿ ಹೇಳಿದರು.
ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲದ ಮತ್ತು ಜಾನುವಾರು ವ್ಯಾಪಾರಿ ಕಬೀರ್‌ನ ಮೇಲೆ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿರುವ ಬಗ್ಗೆ ತಿಳಿದು ಬಂದಿರುವುದಿಲ್ಲ.
ತಪ್ಪಿಸಿಕೊಂಡು ಹೋಗುವ ಸಂದರ್ಭದಲ್ಲಿ ಗುಂಡು ಹಾರಿಸಲಾಯಿತು ಎಂದು ಎ.ಎನ್.ಎಫ್. ಸಿಬ್ಬಂದಿಗಳು ಹೇಳಿದ್ದರೆ, ಆತ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದೆಯಾದರೆ, ಯುವಕನ ಹಿಂಭಾಗಕ್ಕೆ ಗುಂಡು ತಗುಲಬೇಕಾಗಿದ್ದು, ವಿಪರ್ಯಾಸವೆಂಬಂತೆ ಎದೆಗೆ ಗುಂಡಿಕ್ಕಿರುವುದು ಹಲವಾರು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ನಕ್ಸಲರು ಮುಖ್ಯ ರಸ್ತೆಯಲ್ಲಿ ಸಂಚರಿಸಲು ಛತ್ತೀಸ್‌ಗಡದಷ್ಟು ಕರ್ನಾಟಕದಲ್ಲಿ ಅವರು ಬಲಿಷ್ಠವಾಗಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ.
ಮೃತದೇಹವನ್ನು ಕರೆತರಲು ಕುಟುಂಬಸ್ಥರೊಂದಿಗೆ ತೆರಳಿದ್ದ ಜೋಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ಶೇಕುನ್ನಿ ನೇತೃತ್ವದ ಸ್ಥಳೀಯರನ್ನು ಶೃಂಗೇರಿಯ ಬಜರಂಗಿಗಳು ಸರಕಾರಿ ಆಸ್ಪತ್ರೆಯ ಬಳಿ ತಡೆದು ಹಲ್ಲೆ ನಡೆಸಿ ವಾಹನ ಚಾಲಕ ಸಲಾಂ ಎಂಬುವವರಿಗೆ ಮಾರಣಾಂತಿಕ ಹಲ್ಲೆ ನಡೆಸಿ ವಾಹನ ಜಖಂಗೊಳಿಸಿದ್ದಾರೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಈ ಪ್ರಕರಣವು ನೊಂದ ಕುಟುಂಬಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಆಕ್ರೋಶ ವ್ಯಕ್ತಪಡಿಸಿದರು.
ಇದರಲ್ಲಿ ಜಿಲ್ಲಾಡಳಿತ ಮತ್ತು ಸರಕಾರದ ನಿಷ್ಕ್ರಿಯತೆಯು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಗೂಂಡಾಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಸ್‌ಡಿಪಿಐನ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement