ಕಾರ್ಯಕ್ರಮಮುಂದೂಡಲುಆಗ್ರಹ: ಮನವಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.22
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಾರಿಯ ಬಸವ ಜಯಂತಿ ಕಾರ್ಯಕ್ರಮವನ್ನು ಮುಂದೂಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಯುವ ಘಟಕದ ಜಿಲ್ಲಾಧ್ಯಕ್ಷ ಬಿ.ಬಿ. ಪವನ್ ಅವರು ಮಂಗಳವಾರ ಮನವಿ ಸಲ್ಲಿಸಿದರು.
ಬಸವ ಜಯಂತಿ ಕಾರ್ಯಕ್ರಮಕ್ಕೆ ಸಂಘಟನೆಯ ಸದಸ್ಯರನ್ನು ಬಳಸಿಕೊಳ್ಳಬೇಕು. ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಯಂ ಸೇವಕರಾಗಿ ಆಚರಣೆಯ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಬದ್ಧರಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದರು.
ಮನವಿಗೆ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿಗಳು ಜೂನ್ 9 ರಂದು ಬಸವ ಜಯಂತಿ ಕಾರ್ಯಕ್ರಮವನ್ನು ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಪವನ್ ಅವರು ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಘಟಕದ ರಾಜ್ಯ ಸಮಿತಿ ಸದಸ್ಯ ಚೇತನ್, ಮನೋಜ್, ಕಿರಣ್ಕುಮಾರ್, ಉಮೇಶ್ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.