ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಿಷ್ಪಕ್ಷಪಾತ ತನಿಖೆಗೆ ಬಿಜೆಪಿ ಆಗ್ರಹ

Rashmi Kasaragodu
Updated On : 23 Apr 2014, 11:42 am

ಶೃಂಗೇರಿ: ಇತ್ತೀಚೆಗೆ ಕೆರೆಕಟ್ಟೆ ತನಿಕೋಡು ಅರಣ್ಯ ತಪಾಸಣಾ ಕೇಂದ್ರದಲ್ಲಿ ನಡೆದ ಎನ್‌ಕೌಂಟರ್ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಬಿಜೆಪಿ ಮುಖಂಡ ಎ.ಎಸ್. ನಯನ ಆಗ್ರಹಿಸಿದರು.ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಾವಿನ ವಿಚಾರದಲ್ಲಿ ಧರ್ಮ, ಜಾತಿಯನ್ನು ಪರಿಗಣಿಸಬಾರದು. ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಗೋಸಾಗಣೆ ಮಾಡುವಾಗ ಈ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಭವಿಸಿದಂತೆ ಪೊಲೀಸರು ತನಿಖೆ ನಡೆಸಬೇಕು ಎಂದರು.ಪಟ್ಟಣದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನೇ ಗುರಿಯಾಗಿಸಿತಕೊಂಡು ಅಮಾಯಕರ ಮೇಲೆ ಪ್ರಕರಣ ದಾಖಲಿಸುತ್ತಿರುವುದು ತಪ್ಪು. ಘಟನೆಗೆ ಸಂಬಂಧ ಪಡೆದವರನ್ನು ಸೇರಿಸಲಾಗುತ್ತಿದೆ. ಇದು ಶಾಂತಿ ಕದಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಇದಕ್ಕೆ ಸರ್ಕಾರ, ಮುಖ್ಯಮಂತ್ರಿಗಳು, ಗೃಹಸಚಿವರೇ ನೇರ ಕಾರಣರಾಗುತ್ತಾರೆ ಎಂದರು.ಆಸ್ಪತ್ರೆಯ ಬಳಿ ಪೊಲೀಸ್ ಬಂದೋಬಸ್ತ್ ಏಕೆ ಹಾಕಿರಲಿಲ್ಲ. ಉದ್ದೇಶಪೂರ್ವಕವಾಗಿ ಶಾಂತಿ ಕದಡುವ ಕೆಲಸಕ್ಕೆ ಕಾರಣರಾಗಬಾರದು. ಅಮಾಯಕರ ಮೇಲೆ ಪ್ರಕರಣ ದಾಖಲಿಸುವುದನ್ನು ಪಕ್ಷ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಎಸ್. ನಟೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎಸ್. ರಂಗನಾಥ್, ಜಿಪಂ ಸದಸ್ಯ ಬಿ.ಶಿವಶಂಕರ್, ಮಂಜುನಾಥ್ ಪಂಡಿತ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement