ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ನರಸಿಂಹರಾಜಪುರ: ತಾಲೂಕಿನ ಹರಾವರಿ ಗ್ರಾಮದ ಕುಪ್ಪ ಅಲಿಯಾಸ್ ಮಂಜುನಾಥ(52) ಎಂಬವರು ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.
ಮಕ್ಕಳು ಕೆಲಸಕ್ಕೆ ಹೋಗಿದ್ದು, ಸಂಜೆ 7 ಗಂಟೆಗೆ ಮನೆಗೆ ಬಂದಾಗ ಮನೆಯ ಮಾಡಿನ ಗಳಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಕುಪ್ಪ ಅವರ ಪತ್ನಿ 3 ತಿಂಗಳ ಹಿಂದೆ ನಿಧನರಾಗಿದ್ದರು. ಜತೆಗೆ ಕುಪ್ಪ ಅವರಿಗೆ ಉಬ್ಬಸದ ಕಾಯಿಲೆ ಜಾಸ್ತಿಯಾಗಿದ್ದು, ಇದೇ ಕೊರಗಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನರಸಿಂಹರಾಜಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೊಂಡಿದ್ದಾರೆ.
ಮರಳು ಟ್ರ್ಯಾಕ್ಟರ್ ವಶ
ಮೂಡಿಗೆರೆ: ಹೇಮಾವತಿ ನದಿಯಲ್ಲಿ ಅಕ್ರಮವಾಗಿ ಮರಳನ್ನು ತುಂಬಿಸಿ ಸಾಗಿಸಲು ಯತ್ನಿಸುತ್ತಿದ್ದ 5 ಟ್ರ್ಯಾಕ್ಟರ್ ಬಣಕಲ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಣಕಲ್ ಠಾಣಾಧಿಕಾರಿ ಹಾಲಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿದರು.