ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಸಮರ್ಪಕ ವಿದ್ಯುತ್ ಪೂರೈಕೆ: ರಸ್ತೆ ತಡೆ

Vishwanath S
Updated On : 24 Apr 2014, 11:14 am

ಕ.ಪ್ರ.ವಾರ್ತೆ , ತರೀಕೆರೆ , ಏ.23
ಇಲ್ಲಿಗೆ ಸಮೀಪದ ಮುಡುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೆಸ್ಕಾಂನ ಅಸಮರ್ಪಕ ವಿದ್ಯುತ್ ಪೂರೈಕೆ ಕ್ರಮ ಖಂಡಿಸಿ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಮುಡುಗೋಡು ಗ್ರಾಮದಲ್ಲಿ ಬುಧವಾರ ಬೃಹತ್ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.
ಪ್ರತಿಭಟನಾ ಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ರೇವಣ್ಣ ಮಾತನಾಡಿ, ಮುಡುಗೋಡು ಗ್ರಾಮ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಸರಬರಾಜಾಗುತ್ತಿಲ್ಲ. ಪ್ರಸ್ತುತ ಪೂರೈಸುತ್ತಿರುವ ವಿದ್ಯುತ್ ತೀರಾ ಕಡಿಮೆ ವೋಲ್ಟೇಜ್‌ನಿಂದ ಕೂಡಿರುತ್ತದೆ. ಕೂಡಲೇ ಅಧಿಕಾರಿಗಳು ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.
ಒತ್ತಾಯ:  ಜಿ.ಪಂ. ಸದಸ್ಯ ಕೆ.ಪಿ.ಕುಮಾರ್ ಮಾತನಾಡಿ ಮುಡುಗೋಡು ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಕಳೆದ ಕೆಲವಾರು ತಿಂಗಳುಗಳಿಂದ ಸಮರ್ಪಕ ವಿದ್ಯುತ್ ಸರಬರಾಜಿಲ್ಲದೆ ತುಂಬಾ ತೊಂದರೆಯಾಗಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪೂರಕವಾಗಿ ವಿದ್ಯುತ್ ಸೌಲಭ್ಯ ನೀಡುತ್ತಿಲ್ಲ. ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೂ ವಿದ್ಯುತ್ ಇಲ್ಲದೆ ತುಂಬಾ ತೊಂದರೆಯಾಗಿದೆ. ಕೂಡಲೇ ಮೆಸ್ಕಾಂ ಅಧಿಕಾರಿಗಳು ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.
ನೀರಿಗೆ ತೊಂದರೆ:  ಗ್ರಾಮದ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎ.ಜಿ.ಸಿರಾಜ್ ಅಹಮದ್ ಮಾತನಾಡಿ, ಮೆಸ್ಕಾಂ ಅಧಿಕಾರಿಗಳು ಶುಂಠಿ ಬೆಳೆಗೆ ಯಥೇಚ್ಛವಾಗಿ ವಿದ್ಯುತ್ ನೀಡುತ್ತಿದ್ದಾರೆ. ಮುಡುಗೋಡು ಮತ್ತು ಸುತ್ತಮುತ್ತಲ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ.  ಕುಡಿಯುವ ನೀರು ಸರಬರಾಜಿಗೂ ವಿದ್ಯುತ್ ಇಲ್ಲದೆ ತೀವ್ರ ತೊಂದರೆಯಾಗುತ್ತಿದೆ.  ಕೂಡಲೇ ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕೆಂದು ಆಗ್ರಹಿಸಿದರು.
ಬಿ.ರಾಮಪ್ಪ ಮಾತನಾಡಿ ಈ ಕ್ಷಣದಿಂದಲೇ ಸಮರ್ಪಕ ವಿದ್ಯುತ್ ಸರಬರಾಜು ಮಾಡದಿದ್ದರೆ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.
ಗ್ರಾಮದಲ್ಲಿ 2 ಗಂಟೆಗೂ ಹೆಚ್ಚು ಸಮಯ ರಸ್ತೆ ತಡೆ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ಮೆಸ್ಕಾಂನ ಎಇಇ ಹಾಗೂ ಜೆಇ ಅವರಿಗೆ ಗ್ರಾಮದಲ್ಲಿ ಉಂಟಾಗುತ್ತಿರುವ ವಿದ್ಯುತ್ ಸಮಸ್ಯೆಗಳನ್ನು ಗಮನಕ್ಕೆ ತಂದು ಈ ಕೂಡಲೇ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಮುಡುಗೋಡು ಬರಗೇನಹಳ್ಳಿ ರಸ್ತೆ ವೃತ್ತದಿಂದ ಗ್ರಾಮಸ್ಥರು ಮೆರವಣಿಗೆ ನಡೆಸಿದರು. ಎಪಿಎಂಸಿ ಅಧ್ಯಕ್ಷ ರೇವಣ್ಣ, ಗ್ರಾಮ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎ.ಜಿ. ಸಿರಾಜ್ ಅಹಮದ್, ಬಿ.ರಾಮಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ವಿನಾಯಕ, ಗ್ರಾ.ಪಂ. ಸದಸ್ಯರಾದ ಅಣ್ಣೋಜಿರಾವ್, ಮಂಜುಳಮ್ಮ, ರೂಪಾದೇವಿ, ಗ್ಯಾರೇಜ್ ಶ್ರೀನಿವಾಸ್, ಹೊಸಮನೆ ಲೋಕೇಶ್, ಬಸವನಹಳ್ಳಿ ಪ್ರಕಾಶ್, ಹಿತರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಶ್ರೀನಿವಾಸ್ ಮಹಿಳಾ ಸಮಾಜದ ಸದಸ್ಯೆಯರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement