ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಬಿಜೆಪಿ ಗೆಲವು ಖಚಿತ'

Vishwanath S
Updated On : 24 Apr 2014, 11:15 am

ಶೃಂಗೇರಿ: ಚಿಕ್ಕಮಗಳೂರು- ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲವು ಸಾಧಿಸಲಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಎಸ್. ನಟೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಈ ಬಗ್ಗೆ ಹೆಳಿಕೆ ನೀಡಿ ಈ ಬಾರಿ ಮೋದಿ ಅಲೆಯಿದ್ದು, ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಉತ್ತಮ ಕಾರ್ಯನಿರ್ವಹಿಸಿದ್ದಾರೆ ಎಂದವರು ತಿಳಿಸಿದ್ದಾರೆ. ಪಕ್ಷದ ಅಭ್ಯರ್ಥಿ ಸಚಿವರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸುವ ಮನೋಭಾವ ಹೊಂದಿದ್ದು, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಿದ್ದಾರೆ. ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅದಕ್ಕೆ ಪಕ್ಷ ಸ್ಪಂದಿಸಿದೆ. ಶಾಂತಿಯುತವಾಗಿ ಚುನಾವಣೆ ನಡೆದಿದೆ. ಪಕ್ಷದ ಕಾರ್ಯಕರ್ತರಿಗೆ, ಪಕ್ಷ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.
'ಅಕ್ಕನ ಸಂದೇಶ ಮಹಿಳೆಗೆ ದಾರಿದೀಪ'
ಭದ್ರಾವತಿ: ತಮ್ಮ ವಚನಸಾಹಿತ್ಯದ ಮೂಲಕ ಸಮಾಜದ ಉದ್ಧಾರಕ್ಕೆ ನಾಂದಿ ಹಾಡಿದ ಶಿವಶರಣೆ ಅಕ್ಕಮಹಾದೇವಿ ಶಿವಮೊಗ್ಗ ಜಿಲ್ಲೆಗೆ ಸೇರಿದವರು ಎಂಬುದು ಹೆಮ್ಮೆ ತರುವ ವಿಷಯ ಎಂದು ಎವಿಎಸ್ ಪ.ಪೂ. ಕಾಲೇಜು ಉಪ ಪ್ರಾಂಶುಪಾಲೆ ಡಾ. ಹರಿಣಾಕ್ಷಿ ತಿಳಿಸಿದರು.
ಪಟ್ಟಣದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಅಕ್ಕಮಹಾದೇವಿ ಬಳಗದವರು ಏರ್ಪಡಿಸಿದ್ದ ಅಕ್ಕಮಹಾದೇವಿ ಜಯಂತ್ಯುತ್ಸವ ಹಾಗೂ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಉಪನ್ಯಾಸ ನೀಡಿದ ಅವರು ಇಂದಿನ ಮಹಿಳೆಯರು ವಿದ್ಯಾವಂತರಾದರೂ ಸಾಮಾಜಿಕವಾಗಿ ಸರಿಯಾದ ನಿರ್ಣಯ ಕೈಗೊಳ್ಳಲು ಸಾಧ್ಯವಾಗದೆ ಹಲವು ಬಾರಿ ಮೋಸಹೋಗುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಮಾಜಿ ಶಾಸಕ ಬಿ.ಕೆ. ಸಂಗಮೇಶ್ವರ ಇತರರು ಇದ್ದರು.
ಲೋಕಾ ಬಲೆಗೆ ಅಧಿಕಾರಿ
ತರೀಕೆರೆ: ಸ್ಥಳೀಯ ಪುರಸಭೆ ಕಂದಾಯ ಅಧಿಕಾರಿ ಶೇಷಪ್ಪ ಬುಧವಾರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಒಡ್ಡಿದ ಬಲೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ ಶೇಖ್ ಹುಸೇನ್ ತಿಳಿಸಿದ್ದಾರೆ.
ಖಾತೆ ಬದಲಾವಣೆಗಾಗಿ ಅರುಣ ಎನ್ನುವವರಿಂದ ಬುಧವಾರ ಬೆಳಗ್ಗೆ 11-30ಕ್ಕೆ ಕಚೇರಿಯಲ್ಲಿ ರು. 3,200 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಹಾಕಿಕೊಂಡರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಕ್ತಿಭೇದಕ್ಕೆ ಬಂಟರ ಖಂಡನೆ
ಚಿಕ್ಕಮಗಳೂರು: ಬಂಟರ ಸಮಾಜದ ಮಹಿಳೆಯೊಬ್ಬಳನ್ನು ಉಡುಪಿ ಕೃಷ್ಣಮಠದ ಭೋಜನ ಶಾಲೆಯಿಂದ ಬಲವಂತವಾಗಿ ಹೊರಗೆ ಕಳುಹಿಸಿದ ಘಟನೆಯನ್ನು ಜಿಲ್ಲಾ ಬಂಟರ ಯಾನೆ ನಾಡವರ ಸಂಘ ಖಂಡಿಸಿದ್ದು, ಈ ಬಗ್ಗೆ ಮಠದ ಆಡಳಿತ ಮಂಡಳಿ ಕ್ಷಮೆ ಕೋರಬೇಕು ಎಂದು ಹೇಳಿದೆ.
ಶ್ರೀಕೃಷ್ಣ ಮಠದ ಅಭಿವೃದ್ಧಿಗೆ ಬಂಟರು, ಬಿಲ್ಲವರು, ಮೊಗವೀರರು ಸೇರಿದಂತೆ ಎಲ್ಲಾ ಸಮಾಜದವರ ಪಾತ್ರ ಏನೆಂದು ಮಠದ ಸಮಿತಿಯವರು ಮರೆತಿದ್ದಾರೆ. ಮುಂದಿನ ದಿನಗಳಲ್ಲಿ ಬ್ರಾಹ್ಮಣ ಸಮಾಜ ಪ್ರಸಾದ ಸ್ವೀಕರಿಸುವ ಸಮಯದಲ್ಲಿ ಪಂಕ್ತಿಭೇದ ಮಾಡುವುದನ್ನು ನಿಲ್ಲಿಸದಿದ್ದಲ್ಲಿ ಸಂಘದಿಂದ ಎಲ್ಲಾ ರೀತಿಯ ಹೋರಾಟ  ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಕರುಣಾಕರ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ.
ಅರ್ಜಿ ಆಹ್ವಾನ
ಚಿಕ್ಕಮಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಉನ್ನತೀಕರಿಸಿದ ಶಾಲೆಗಳಲ್ಲಿ ನೇಮಕಾತಿಯ ಪೂರ್ವದಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸದರಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನವಾಗಿದ್ದು, ಪರೀಕ್ಷೆಯು ಜೂನ್ 1 ರಂದು ನಡೆಯಲಿದೆ. ಮಾಹಿತಿಗಾಗಿ ವೆಬ್‌ಸೈಟ್ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ಅಥವಾ ಪ್ರಾಂಶುಪಾಲರು, ಡಯಟ್ ಹಾಗೂ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಇವರನ್ನು ಅಥವಾ ಸಹಾಯವಾಣಿ 8904779508, 8904765537 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 2.30ರ ವರೆಗೆ ಚಿಕ್ಕಮಗಳೂರು ವಿವಿ ಕೇಂದ್ರದಿಂದ ಹೊರಹೊಮ್ಮುವ 66 ಕೆವಿ ಆಲ್ದೂರು, ಬಾಳೆಹೊನ್ನೂರು ಪ್ರಸರಣ ಮಾರ್ಗದಲ್ಲಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆಲ್ದೂರು, ಬಾಳೆಹೊನ್ನೂರು ಮತ್ತು ಚಿಕ್ಕಮಗಳೂರು ವಿವಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ. ಪಟ್ಟಣ ಮತ್ತು ಗ್ರಾಮೀಣ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂತಾಪ
ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಅವರ ನಿಧನಕ್ಕೆ ಬೀರೂರು ಕ್ಷೇತ್ರದ ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಅವರು ಸಂತಾಪ ಸೂಚಿಸಿದ್ದಾರೆ.
'ಕಾಂಗ್ರೆಸ್ ಗೆಲವು ಖಚಿತ'
ಕಡೂರು: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಪರವಾದ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹಾಗೂ ಕಾಂಗ್ರೆಸ್‌ನ ಸಾಮೂಹಿಕ ಹೋರಾಟದಿಂದ ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಎಲ್ಲೆಡೆ ಹೆಚ್ಚಿನ ಮತಗಳಿಸಿ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜುರವರು ಗೆಲುವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  
ಚುನಾವಣೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಪ್‌ಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ಪಕ್ಷದ ಸಮರ್ಥ ಅಭ್ಯರ್ಥಿ ಎ. ಮಂಜುರವರ ಗೆಲವಿಗಾಗಿ ಮತದಾರರ ಮನವೊಲಿಸುವಲ್ಲಿ ಶ್ರಮವಹಿಸಿದ್ದಾರೆ ಎಂದರು.
ಬಿಜೆಪಿ ಈ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಬಿಜೆಪಿ ಅಲೆ ಇಲ್ಲ. ಹಾಸನ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ವಲಸೆ ಬಂದವರಾದ್ದರಿಂದ ಮತದಾರರು ಈ ಅಭ್ಯರ್ಥಿಗಳನ್ನು ಸ್ವೀಕರಿಸಿಲ್ಲ ಎಂದವರು ವಿಶ್ಲೇಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement