ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಮಟ್ಕಾ, ಮರಳು ದಂಧೆ ನಿಯಂತ್ರಿಸಿ'

Vishwanath S
Updated On : 24 Apr 2014, 11:15 am

ಮೂಡಿಗೆರೆ:  ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಮಟ್ಕಾ ಮತ್ತು ಮರಳು ದಂಧೆ ಮಿತಿಮೀರಿದ್ದು, ಶೀಘ್ರ ಕಡಿವಾಣ ಹಾಕಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ದಾರದಹಳ್ಳಿ ಪ್ರಸನ್ನ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಲಾಟರಿಗಳನ್ನು ನಿಷೇಧಿಸಿದ ನಂತರ ಮಟ್ಕಾದಂಧೆಗೆ ಕಡಿವಾಣವೇ ಇಲ್ಲದಂತಾಗಿದೆ. ಅದರಲ್ಲೂ ಇತ್ತೀಚೆಗೆ ಮಟ್ಕಾ ದಂಧೆ ಮೊಬೈಲ್ ಮೂಲಕ ನಡೆಯುತ್ತಿದೆ. 5000 ದಿಂದ 10000 ವರೆಗೂ ನಡೆಯುತ್ತಿದೆ. ಕೋಟ್ಯಂತರ ರು. ವ್ಯವಹಾರ ನಡೆಯುತ್ತಿದೆ ಎಂದರು.
ಪಟ್ಟಣದ ಠಾಣೆಯ ಸಮೀಪವೇ ಈ ದಂಧೆ ನಡೆಯುತ್ತಿದ್ದರೂ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ತಕ್ಷಣವೇ ಮಟ್ಕಾ ದಂಧೆಗೆ ಕಡಿವಾಣ ಹಾಕುವಂತೆ ತಪ್ಪಿದಲ್ಲಿ ಸಾರ್ವಜನಿಕರೊಂದಿಗೆ ದಂಧೆಕೋರರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗೌರವಾಧ್ಯಕ್ಷ ಹೊರಟ್ಟಿ ರಘು ಮಾತನಾಡಿ, ಸಾಮಾನ್ಯ ಕೂಲಿ ಕಾರ್ಮಿಕರು ಹೆಚ್ಚಿನ ಹಣದ ಆಸೆಗೆ ಮಟ್ಕಾ ಆಡಲು ಹೋಗಿ ದುಡಿದ ಹಣ ಕಳೆದುಕೊಂಡು ಬರಿಗೈಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾರೆ. ಹೆಂಡತಿ ಮಕ್ಕಳು ಉಪವಾಸ ಬೀಳುವಂತಾಗಿದೆ ಎಂದರು.
ಮಲೆನಾಡಿನ ಜೀವನದಿ ಹೇಮಾವತಿ ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು ಹಣದ ಆಸೆಯಿಂದ ಹೇಮಾವತಿ ಒಡಲನ್ನು ಬಗೆಯುತ್ತಿದ್ದರೂ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ನಿರ್ಲಕ್ಷ ಧೋರಣೆ ತಾಳುತ್ತಿರುವ ಪರಿಣಾಮ ಹೇಮಾವತಿ ನದಿ ಬರಿದಾಗುತ್ತಿದೆ. ಹೀಗೆ ನಿರ್ಲಕ್ಷ್ಯ ಮುಂದುವರಿದರೆ ಮಲೆನಾಡಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ಹಿನ್ನೆಲೆ ಅಕ್ರಮಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲು ಸಹ ನಿರ್ಧರಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರವಿ, ಬಾಲು, ಮಹೇಶ್, ಸುಮಿತ್ರೆಗೌಡ ಉಪಸ್ಥಿತರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement