ಕಾಲ್ಪನಿಕ ವೇತನ ನಿಗದಿಗೆ ಒತ್ತಾಯ
ಚಿಕ್ಕಮಗಳೂರು: ಖಾಸಗಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಸಿಬ್ಬಂದಿಗಳ ಅನುದಾನ ರಹಿತ ಸೇವೆಯನ್ನು ಪರಿಗಣಿಸಿ ಕಾಲ್ಪನಿಕ ವೇತನ ನಿಗದಿಪಡಿಸಲು ಮಾಹಿತಿಯನ್ನು ಸರ್ಕಾರಕ್ಕೆ ತುರ್ತಾಗಿ ಸಲ್ಲಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಬಿ. ರಾಜಪ್ಪ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮೂರು ದಿನಗಳೊಳಗಾಗಿ ಸಲ್ಲಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಏ.28ರೊಳಗೆ ಈ ಮಾಹಿತಿಯನ್ನು ಕ್ರೋಡೀಕರಿಸಿ ಜಿಲ್ಲಾ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕೆಂದು ತಿಳಿಸಿದ್ದಾರೆ